ಬೆಂಗಳೂರು :ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪ್ರಾರಂಭಿಸಿರುವ ಜ್ಞಾನ ತಾಣ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಆನ್​ಲೈನ್ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಿಎಂ, ಕೋವಿಡ್ ಸಂದರ್ಭ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ ವಿಶೇಷವಾಗಿ ಗ್ರಾಮೀಣ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಜ್ಞಾನ ತಾಣ ಯೋಜನೆ ಜಾರಿಗೆ ತಂದಿರುವುದು ಮಹತ್ವದ ಸಂಗತಿ. ಆನ್​ಲೈನ್ ಸಿಗದವರು ಆಫ್​ಲೈನ್ ಮೂಲಕ ಮನೆಯಲ್ಲಿಯೇ ವಿದ್ಯಾಭ್ಯಾಸ ಮಾಡಲು ಈ ಯೋಜನೆ ಸಹಕಾರಿಯಾಗಿದೆ ಎಂದರು.
ಧಾರ್ವಿುಕ ಮತ್ತು ಸರ್ವಧರ್ಮ ಸಮನ್ವಯತೆ ಸಾರುವ ಕೇಂದ್ರವಾಗಿರುವ ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನಡೆಯತ್ತಿರುವ ಹತ್ತು ಹಲವು ಯೋಜನೆಗಳನ್ನು ಸಿಎಂ ಶ್ಲಾಘಿಸಿದರು. ನೈತಿಕತೆ, ಸರಳತೆ ಮತ್ತು ಧಾರ್ವಿುಕ ಸಮನ್ವಯತೆ ಹೊಂದಿರುವ ಶ್ರೀ ಮಂಜುನಾಥನ ಕ್ಷೇತ್ರ ಪರಂಪರೆಯನ್ನು ಬದ್ಧತೆಯಿಂದ ಮುಂದುವರಿಸಿಕೊಂಡು ಬರುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕರೆ ನೀಡಿದರು.
ಆನ್​ಲೈನ್ ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಯೋಜನೆ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು. ಧರ್ಮಸ್ಥಳ ಸಂಸ್ಥೆಯ ಡಿ.ಸುರೇಂದ್ರಕುಮಾರ್, ಡಾ.ಎಲ್.ಎಚ್.ಮಂಜುನಾಥ್ ಮತ್ತಿತರರು ಹಾಜರಿದ್ದರು. ಇದೇ ಸಂದರ್ಭ ಫಲಾನುಭವಿಗಳಿಗೆ ಲ್ಯಾಪ್​ಟಾಪ್ ಮತ್ತು ಟ್ಯಾಬ್​ಗಳನ್ನು ಸಿಎಂ ವಿತರಣೆ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
