ಬೆಂಗಳೂರು:ಕೋವಿಡ್ ಸೋಂಕು ದೃಢಪಟ್ಟ ಕಾರಣ ಖಿನ್ನತೆಗೆ ಒಳಗಾದ ಪೇದೆಯೊಬ್ಬರು ಆಂಬುಲೆನ್ಸ್​ನಲ್ಲೇ ಆತ್ಮಹತ್ಯೆಗೆ ಶರಣಾದರು. ಬದುಕನ್ನೇ ದರಂತ ಅಂತ್ಯವಾಗಿಸಿಕೊಂಡ ಕರ್ನಾಟಕ ರಾಜ್ಯ ಮೀಸಲು ಪಡೆಯ ಬೆಂಗಳೂರು ನಗರದ 4ನೇ ಬೆಟಾಲಿಯನ್‌ನ ಸಶಸ್ತ್ರ ಪೇದೆ ಸಾವು ದುಃಖಕರ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಕಂಬನಿ ಮಿಡಿದಿದ್ದಾರೆ.
ಪೇದೆ ಮಂಜೇಶ್ ಆತ್ಮಹತ್ಯೆ ಬೆನ್ನಲ್ಲೇ ಟ್ವೀಟ್​ ಮೂಲಕ ಸಂತಾಪ ಸೂಚಿಸಿರುವ ಸಿಎಂ, ಪೊಲೀಸರಿಗೆ ಪ್ರತ್ಯೇಕ ಕೋವಿಡ್ ಪರೀಕ್ಷಾ ಕೇಂದ್ರ ಆರಂಭಿಸಲಾಗುತ್ತಿದೆ. ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ.ಇದನ್ನೂ ಓದಿರಿಮತ್ತೆ 20 ದಿನ ದೇಶಾದ್ಯಂತ ಕಂಪ್ಲೀಟ್​ ಲಾಕ್​ಡೌನ್​?
ಕರೊನಾ ವಾರಿಯರ್ಸ್​ ಆಗಿರುವ ಪೊಲೀಸ್ ಸಿಬ್ಬಂದಿ ಸೋಂಕು ಮಣಿಸುವ ಹೋರಾಟದಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗಾಗಿಯೇ ಪ್ರತ್ಯೇಕ ಕೋವಿಡ್ ಪರೀಕ್ಷಾ ಕೇಂದ್ರ ಪ್ರಾರಂಭಿಸಲಾಗುತ್ತಿದೆ ಎಂದು ಸಿಎಂ ಹೇಳಿದ್ದಾರೆ.
3/4ಪೊಲೀಸ್ ಸಿಬ್ಬಂದಿ ಕೋವಿಡ್ ಸಂಬಂಧಿತ ಕೆಲಸಗಳಲ್ಲಿ ಮುಂಚೂಣಿಯಲ್ಲಿ ವಾರಿಯರ್ ಗಳಾಗಿ ಜೀವವನ್ನೇ ಪಣಕ್ಕಿಟ್ಟು ಶ್ಲಾಘನೀಯ ಕೆಲಸ ಮಾಡುತ್ತಿದ್ದು, ಅವರಿಗಾಗಿಯೇ ಪ್ರತ್ಯೇಕ ಕೋವಿಡ್ ಪರೀಕ್ಷಾ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲು ಎಲ್ಲ ಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
— CM of Karnataka (@CMofKarnataka)June 23, 2020

ರಾಜ್ಯದಲ್ಲಿ ಒಟ್ಟಾರೆ ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಸಂಖ್ಯೆ ಇತರ ಪ್ರಮುಖ ರಾಜ್ಯಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಯಾವುದೇ ಸೋಂಕಿತ ನಾಗರಿಕರು ಹಾಗೂ ಸರ್ಕಾರಿ ಸಿಬ್ಬಂದಿ ದೃತಿಗೆಡುವ ಅಗತ್ಯವಿಲ್ಲ. ಸರ್ಕಾರ ಸದಾ ನಿಮ್ಮ ಜತೆಯಲ್ಲಿರಲಿದೆ ಎಂದು ಬಿಎಸ್​ವೈ ಭರವಸೆ ನೀಡಿದ್ದಾರೆ.
ಡಿಕೆಶಿ ಸಮ್ಮುಖದಲ್ಲೇ ಕರೊನಾ ನಿಯಮ ಗಾಳಿಗೆ ತೂರಿದ ‘ಕೈ’ ಪಡೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 8 =
Remember me
