ಚಾಮರಾಜನಗರ:ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಚಾಮರಾಜನಗರ ಜಿಲ್ಲಾಡಳಿತ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ’ “ಭರಚುಕ್ಕಿ ಜಲಪಾತೋತ್ಸವ” ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪರಿಸರ ಪ್ರವಾಸೋಧ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆಯಾಗಿದೆ. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ಹಿಂದೆ ಉಳಿದಿದೆ. ಈ ಜಿಲ್ಲೆಗೆ ಕಾಲಿಟ್ಟರೆ ಅಧಿಕಾರ ಹೋಗ್ತದೆ ಎನ್ನುವ ಮೂಢನಂಬಿಕೆ ಬಿತ್ತಿದ್ದರು. ಆದರೂ ನಾನು ಹತ್ತಕ್ಕೂ ಹೆಚ್ಚು ಬಾರಿ ಜಿಲ್ಲೆಗೆ ಮುಖ್ಯಮಂತ್ರಿಯಾಗಿ ಬಂದಿದ್ದೇನೆ. ಇಲ್ಲಿಗೆ ಬಂದಾಗೆಲ್ಲಾ ನನ್ನ ಕುರ್ಚಿ ಹೆಚ್ಚು ಗಟ್ಟಿಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ ವಾಮಂಜೂರು ಪರಿಸರಸರದಲ್ಲಿ 11ನೇ ತಿಂಗಳ ಶ್ರಮದಾನ ಸುಮಾರು 400 ಗಿಡಗಳನ್ನು ನೆಟ್ಟ ಸ್ವಯಂಸೇವಕರು
ನನ್ನ ಕುರ್ಚಿಯನ್ನು ಬಿಜೆಪಿ-ಜೆಡಿಎಸ್​ನವರು ಅಲ್ಲಾಡಿಸುತ್ತಲೇ ಇದ್ದಾರೆ. ಅವರು ಎಷ್ಟೇ ಅಲ್ಲಾಡಿಸಿದ್ರೂ ನಾನು ಇನ್ನಷ್ಟು ಗಟ್ಟಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಲೇ ಇರ್ತೇನೆ. ಸಿದ್ದರಾಮಯ್ಯರ ಕಾಲ್ಗುಣ ಸರಿ ಇಲ್ಲ. ಅದಕ್ಕೆ ರಾಜ್ಯದಲ್ಲಿ ಮಳೆ ಇಲ್ಲ ಎಂದು ನನ್ನ ಬಗ್ಗೆ ಆರೋಪಿಸಿದ್ದರು. ಆದರೆ, ಈ ಬಾರಿ ಉತ್ತಮ ಮಳೆ ಅಂದರೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ನನ್ನ ಬಗ್ಗೆ ಮೂಡಿಸಿದ್ದ ಮತ್ತೊಂದು ಮೂಢನಂಬಿಕೆ ಕೂಡ ಸುಳ್ಳಾಗಿದೆ ಎಂದರು.
ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಪಡಿಸಲು ಸರ್ಕಾರ ಎಲ್ಲಾ ನೆರವನ್ನೂ ನೀಡಲಿದೆ. ಅಗತ್ಯಬಿದ್ದರೆ ಹೊಸ ಪ್ರವಾಸೋಧ್ಯಮ ನೀತಿಯನ್ನೂ ರಚಿಸಲಾಗುವುದು. ಬಿಳಿಗಿರಿರಂಗನಬೆಟ್ಟ, ಗಗನಚುಕ್ಕಿ ರೋಪ್ ವೇ, ಇಲ್ಲಿನ ದೇವಸ್ಥಾನ ಅಭಿವೃದ್ಧಿ, ಸುವರ್ಣಾವತಿ ಜಲಾಶಯದಲ್ಲಿ ಜಲ ಸಾಹಸ ಕ್ರೀಡೆಗಳನ್ನು ಆರಂಭಿಸುವುದೂ ಸೇರಿ ಎಲ್ಲಾ ಯೋಜನೆಗಳಿಗೂ ಸರ್ಕಾರ ಜತೆಗೆ ನಿಲ್ಲಲಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಮೂಲಕ ಆರ್ಥಿಕತೆಯ ಪ್ರಗತಿ ಕಾಣಿಸಲು ಎಲ್ಲಾ ಸಹಕಾರವನ್ನೂ ನಮ್ಮ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಬಾಲ್ಯದಲ್ಲೇ ಹೆತ್ತವರ ಕಳೆದುಕೊಂಡ ಅಮನ್​ ಕಷ್ಟ ಕೇಳಿದ್ರೆ ಕಣ್ಣೀರು ತರಿಸುತ್ತೆ; ಕಂಚಿನ ಹಿಂದೆ ಇಷ್ಟೆಲ್ಲಾ ಶ್ರಮವಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 11 =
Remember me
