ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಕಾಂಗ್ರೆಸ್​ನಲ್ಲಿ ಕೊನೆಗೂ ತೀರ್ಮಾನವಾದ ಬೆನ್ನಿಗೆ ರಾಜ್ಯ ಬಿಜೆಪಿಯಲ್ಲೂ ಇದೀಗ ಭಾರಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆ ಹಿನ್ನೆಲೆಯಲ್ಲಿ ರಾಜಕಾರಣ ಚುರುಕುಗೊಂಡಿದೆ.
ಈ ಹಿಂದೆ ವಿಧಾನಸಭೆಯ ವಿಪಕ್ಷ ನಾಯಕ ಆಗಿದ್ದ ಸಿದ್ದರಾಮಯ್ಯ ಇದೀಗ ನೂತನ ಮುಖ್ಯಮಂತ್ರಿ ಆಗಿ ಆಯ್ಕೆಗೊಂಡಿದ್ದರಿಂದ, ಇನ್ನೊಮ್ಮೆ ಸಿಎಂ ಆಗುವ ಅವಕಾಶ ಸಿಕ್ಕಿದೆ. ಮತ್ತೊಂದೆಡೆ ಪ್ರಬಲ ಆಕಾಂಕ್ಷಿಯಾಗಿದ್ದ ಡಿ.ಕೆ.ಶಿವಕುಮಾರ್​ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.
ಇದನ್ನೂ ಓದಿ:ಸಿಎಂ ಸ್ಥಾನಕ್ಕಾಗಿ ‘ಬಂಡೆ’ದ್ದ ಡಿ.ಕೆ.ಶಿವಕುಮಾರ್​ ಮನವೊಲಿಸಿದ್ಯಾರು?
ಕಾಂಗ್ರೆಸ್​ನಲ್ಲಿ ಸಿಎಂ ಆಯ್ಕೆ ಗೊಂದಲ ಪರಿಹಾರ ಆಗುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆಗೆ ಮುಂದಾಗಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಂಗಾಮಿ ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕನ ಆಯ್ಕೆ ಕುರಿತು ಶೀಘ್ರವೇ ಶಾಸಕಾಂಗ ಪಕ್ಷದ ಸಭೆ ಕರೆದು ಪ್ರಕ್ರಿಯೆ ನಡೆಸುತ್ತೇವೆ ಎಂದಿದ್ದಾರೆ.
ಹೆಲ್ಮೆಟ್​ ಧರಿಸದ ಮಹಿಳಾ ಪಿಎಸ್​ಐ; ಟ್ವೀಟ್ ವೈರಲ್ ಆಗುತ್ತಿದ್ದಂತೆ ಪ್ರಕರಣ ದಾಖಲು, ದಂಡ ವಿಧಿಸಿದ ಪೊಲೀಸರು

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ; ಡಿ.ಕೆ.ಶಿವಕುಮಾರ್ ಡಿಸಿಎಂ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + seven =
Remember me
