ಗದಗ:ಭಾರತವನ್ನು ಕೇವಲ ಹಿಂದು ರಾಷ್ಟ್ರವನ್ನಾಗಿ ಮಾಡಲು ಸಾಧ್ಯವಿಲ್ಲ. ಈ ದೇಶ ಹಿಂದು ರಾಷ್ಟ್ರ ಆಗಬೇಕೆಂಬುದು ಬಿಜೆಪಿಯವರ ಸಿದ್ಧಾಂತ. ನಮ್ಮ ದೇಶ ಹಿಂದುಗಳ ರಾಷ್ಟ್ರ ಅಲ್ಲ, ಇದು ಬಹುತ್ವದ ದೇಶವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅಯೋಧ್ಯೆಯಲ್ಲಿನ ರಾಮಮಂದಿರ ಉಳಿಯಬೇಕೆಂದರೆ ಭಾರತ ಹಿಂದೂ ರಾಷ್ಟ್ರ ಆಗಬೇಕೆಂಬ ಉಡುಪಿ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಈ ದೇಶ ಹಿಂದು ರಾಷ್ಟ್ರ ಆಗಬೇಕೆಂಬುದು ಬಿಜೆಪಿಯವರ ಸಿದ್ಧಾಂತ. ನಮ್ಮ ದೇಶ ಹಿಂದುಗಳ ರಾಷ್ಟ್ರ ಅಲ್ಲ, ಇದು ಬಹುತ್ವದ ದೇಶವಾಗಿದೆ. ಕೇವಲ ಹಿಂದೂ ರಾಷ್ಟ್ರವನ್ನು ಮಾಡಲು ಆಗುವುದಿಲ್ಲ.
ನಮ್ಮ ದೇಶದಲ್ಲಿ ಕ್ರಿಶ್ಚಿಯನ್, ಮುಸ್ಲಿಂ, ಬೌದ್ಧ, ಜೈನರು ಸಹ ಇದ್ದಾರೆ. 1950ರಲ್ಲಿ ಜನಸಂಘ ಸ್ಥಾಪಿಸಿ ಹಿಂದೂ ರಾಷ್ಟ್ರ ಮಾಡುತ್ತೇವೆ ಅಂದರು. 1925ರಲ್ಲಿ ಹೆಡ್ಗೇವಾರ್​ ಆರ್​ಎಸ್​​ಎಸ್​ ಸ್ಥಾಪನೆ ಮಾಡಿದ್ದರು. ಈ ಬಗ್ಗೆ ಬಿಜೆಪಿಯವರನ್ನು ಕೇಳಿ, ಅವರಿಗೆ ಇವೆಲ್ಲವೂ ಗೊತ್ತೇ ಇಲ್ಲ. ಬಿಜೆಪಿಯವರು ಸುಮ್ಮನೆ ಬುರುಡೆ ಬಿಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಈಜಲು ಬಾರದೆ ನೀರಿಗಿಳಿದ ಒಂದೇ ಕುಟುಂಬದ ಐವರ ದುರ್ಮರಣ
ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ. ತನಿಖೆಯಾಗಿ ತಪ್ಪಿತಸ್ಥರಿಗೆ‌ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಮಾಡಲು ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ಸಾಕ್ಷ್ಯ ಸಂಗ್ರಹಿಸಿ ಶಿಕ್ಷೆ‌ ಕೊಡಿಸಲು ಪೊಲೀಸರೇ ತಯಾರಾಗಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜು ವರದಿ ಸ್ವೀಕರಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಕಾಂತರಾಜು ವರದಿ ಇನ್ನೂ ಸಲ್ಲಿಕೆಯಾಗಿಲ್ಲ, ಸ್ವೀಕಾರ ಮಾಡಲು ಹೇಗೆ ಸಾಧ್ಯ. ಶಾಶ್ವತ ಹಿಂದೂಳಿದ ವರ್ಗದ ಆಯೋಗದವರು ಇನ್ನೂ ವರದಿ ಕೊಟ್ಟಿಲ್ಲ. ವರದಿ‌ ಕೊಡಲು ಬಂದಾಗ ವಿಚಾರ ಮಾಡುತ್ತೇವೆ. ವರದಿಯಲ್ಲಿ ಏನಿದೆ ಅಂತ ಸಿಎಂ ಆದ ನನಗೆ ಗೊತ್ತಿಲ್ಲ. ಕೆಲವರು ಊಹಾಪೋಹಗಳ ಆಧಾರದ ಮೇಲೆ ವಿರೋಧಿಸುತ್ತಿದ್ದಾರೆ. ವರದಿ ಬಂದ ನಂತರವೇ ವೈಜ್ಞಾನಿಕನಾ, ಅವೈಜ್ಞಾನಿಕನಾ ಅಂತ ಗೊತ್ತಾಗುತ್ತೆ. ವರದಿ ಬಂದ ನಂತರ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − one =
Remember me
