ಬೆಂಗಳೂರು:ಈ ಹಿಂದೆ ನಮ್ಮ ಸರ್ಕಾರದ ಅಧಿಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ (CM Siddarmaiah) ಭರವಸೆ ನೀಡಿದ್ದಾರೆ.
ಇದನ್ನೂ ಓದಿ:VIDEO| ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ಪತ್ರ ಹರಿದು ಹಾಕಿದ ಮಹಿಳಾ ಬೆಂಬಲಿಗರು
ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡುವುದಾಗಿ ನಿಯೋಗಕ್ಕೆ ಸಿಎಂ ಭರವಸೆ ನೀಡಿದ್ದು, ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಿದ್ದೇವೆ. ಸರ್ಕಾರ ಈಗಾಗಲೇ ಘೋಷಿಸಿದಂತೆ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತಿದ್ದು, ಶೀಘ್ರವೇ ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಕಳೆದ ಐದು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳಲ್ಲಿ ಅನುದಾನ ಹೆಚ್ಚಳ, ವಸತಿ ಶಾಲೆ, ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸುವಂತೆ ಹಲವು ಬೇಡಿಕೆಗಳನ್ನು ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಸಿಎಂ ಸಿದ್ದರಾಮಯ್ಯ ಅವರ ಮುಂದಿಟ್ಟಿತು. ಸದ್ಯ ಇದಕ್ಕೆ ಮುಖ್ಯಮಂತ್ರಿಗಳು ಭರವಸೆ ನೀಡಿದ್ದು, ಮುಂದಿನ ದಿನಗಳಲ್ಲಿ ಈ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 9 =
Remember me
