ಬೆಂಗಳೂರು:ಕನ್ನಡ ರಾಜ್ಯೋತ್ಸವ ದಿನವಾದ ಇಂದು (ನ.1) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗಳಿಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ಹೌದು, ಇಂದಿನಿಂದ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರು ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಸಿದ್ದರಾಮಯ್ಯ ಮಾತನಾಡಿದರು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.
ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದರು.
ಮೈಸೂರಿನ ತಾಯಿ ಭುವನೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಕನ್ನಡಾಂಬೆ ದೇಗುಲದ ವಿಶೇಷತೆಗಳಿವು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 − four =
Remember me
