ತಿರುವನಂತಪುರ:ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಸರಣಿ ಭೂ ಕುಸಿತದಿಂದ ಮೃತಪಟ್ಟವರ ಸಂಖ್ಯೆ ಮಂಗಳವಾರ ರಾತ್ರಿ ವೇಳೆಗೆ 200ಕ್ಕೆ ಏರಿಕೆಯಾಗಿದೆ. ನಾಪತ್ತೆಯಾದ 100ಕ್ಕೂ ಹೆಚ್ಚು ಜನರಿಗಾಗಿ ಶೋಧ ಮುಂದುವರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:ಮೋದಿಯನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ್! ಪ್ರಧಾನಿ ಮುಂದೆ ಇಟ್ಟ ಬೇಡಿಕೆ ಏನು?
ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ.

ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ.
ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು…
— CM of Karnataka (@CMofKarnataka)July 31, 2024
ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ಇಂದು ಮಾತನಾಡಿ, ವಯನಾಡು ಭೂಕುಸಿತದಿಂದುಂಟಾದ ಸಾವು ನೋವಿನ ಬಗ್ಗೆ ನನ್ನ ಕಳವಳ ವ್ಯಕ್ತಪಡಿಸಿ, ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಸಂಕಷ್ಟದಲ್ಲಿರುವ ಜನರ ರಕ್ಷಣಾ ಕಾರ್ಯ, ಆಹಾರ, ನೀರು, ವೈದ್ಯಕೀಯ ನೆರವು ಸೇರಿದಂತೆ ಕರ್ನಾಟಕದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದ್ದೇನೆ.
ಇಂತಹ ನೋವಿನ ಘಳಿಗೆಯಲ್ಲಿ ಕರ್ನಾಟಕವು ಕೇರಳದ ಜೊತೆ ಇರಲಿದೆ, ಒಟ್ಟಾಗಿ ಈ ಸವಾಲನ್ನು ಎದುರಿಸೋಣ ಎಂಬ ಭರವಸೆಯನ್ನು ಪಿಣರಾಯಿ ವಿಜಯನ್ ಅವರಲ್ಲಿ ತುಂಬಿದ್ದೇನೆ ಎಂದಿದ್ದಾರೆ.
ಹೈಕಮಾಂಡ್‌ಗೆ ಮುಡಾ, ವಾಲ್ಮೀಕಿ ಹಗರಣದ ವರದಿ ನೀಡಿದ ಸಿಎಂ, ಡಿಸಿಎಂ: ಸಭೆಯಲ್ಲಿ ಏನೇನು ಚರ್ಚೆ? ಇಲ್ಲಿದೆ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
