ಬೆಂಗಳೂರು:ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಕ್ರಾಸ್​ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಗಳಿಗೆ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ.
ದೆಹಲಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಮಕ್ಕಳು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಲಾ ಎರಡು ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು.– ಮುಖ್ಯಮಂತ್ರಿ@siddaramaiah#ಹಾವೇರಿಅಪಘಾತ
ಇದನ್ನೂ ಓದಿ:ಜೈಲಿನಲ್ಲಿದ್ದುಕೊಂಡೆ ಅಭಿಮಾನಿಗಳಿಗೆ ವಿಶೇಷ ಸಂದೇಶ ರವಾನಿಸಿದ ದರ್ಶನ್; ದಾಸನ ಮಾತಿಗೆ ಬೆಲೆ ಕೊಡ್ತಾರಾ ಫ್ಯಾನ್ಸ್​?
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಿಎಂ ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.
ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಕ್ರಾಸ್​ನಲ್ಲಿ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವರು ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದಾರೆ.

ಹಾವೇರಿ ಜಿಲ್ಲೆಯ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 4 ವರ್ಷ ಹಾಗೂ 6 ವರ್ಷದ ಇಬ್ಬರು ಮಕ್ಕಳು ಸೇರಿ 13 ಜನ ಮೃತಪಟ್ಟ ಘಟನೆ ಮಮ್ಮಲ ಮರುಗುವಂತೆ ಮಾಡಿದೆ.ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದವರಾಗಿದ್ದು ಮೃತರ ಕುಟುಂಬಕ್ಕೆ ಆಘಾತ…pic.twitter.com/rN92NtIWTc
ಇಂದು ಮುಂಜಾನೆ ಹಾವೇರಿ ಜಿಲ್ಲೆ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ತಿಳಿದು ಬಹಳ ದುಃಖವಾಗಿದೆ. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.ರಾಜ್ಯ ಸರ್ಕಾರ ಈ ಕೂಡಲೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ…
ಇಂದು ಬೆಳಗಿನ ಜಾವ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ.ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.ರಾಜ್ಯ ಸರ್ಕಾರ ಮೃತರ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
