ಬೆಂಗಳೂರು:ದಾಖಲೆಯ 14ನೇ ಬಾರಿ ಬಜೆಟ್​ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾವು ನುಡಿದಂತೆ ನಡೆದಿದ್ದೇವೆ. ಮುಂದೆಯೂ ಈಗೆ ಇರುತ್ತೇವೆ ಎಂದು ನಾಡಿನ ಜನತೆಗೆ ಭರವಸೆಯನ್ನು ನೀಡಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಬಜೆಟ್​ನಲ್ಲಿ 5 ಸಾವಿರ ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(KKRDB)ಯಲ್ಲಿ 2 ಸಾವಿರ ಕೋಟಿ ರೂಪಾಯಿಗೂ ಹೆಚ್ಚಿನ ಅನುದಾನವನ್ನು ಬಳಸದೆ ಹಾಗೆ ಉಳಿಕೆಯಾಗಿರುವುದನ್ನು ಗಮನಿಸಲಾಗಿದೆ. ಎಲ್ಲ ನ್ಯೂನತೆಗಳನ್ನು ಸರಿಪಡಿಸಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುವುದು.
ಇದನ್ನೂ ಓದಿ:ಬಜೆಟ್​ ಹೆಸರಿನಲ್ಲಿ ರಾಜ್ಯದ ಜನತೆಯ ಕಿವಿ ಮೇಲೆ ಹೂ ಇಟ್ಟಿದ್ದಾರೆ: ಎಚ್​.ಡಿ. ಕುಮಾರಸ್ವಾಮಿ
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಪ್ರತ್ಯೇಕವಾಗಿ ಪ್ರದೇಶಾಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾರಿ ಮೊತ್ತದ ಅನುದಾನವನ್ನು ಘೋಷಿಸಿಲಾಯಿತ್ತಾದರೂ ಅದನ್ನು ಸಮರ್ಪಕವಾಗಿ ಬಳಸಿಕೊಂಡಿರಲಿಲ್ಲ.
ಸಮರ್ಪಕವಾದ ಕ್ರಿಯಾ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುವಲ್ಲಿ ಬಿಜೆಪಿ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಇದರ ಪರಿಣಾಮವಾಗಿ KKRDBಯಲ್ಲಿ 2 ಸಾವಿರ ಕೋಟಿಗೂ ಹೆಚ್ಚಿನ ಮೊತ್ತ ಬಳಕೆಯಾಗದೆ ಹಾಗೆಯೇ ಉಳಿದಿದೆ ಎಂದು ಬಜೆಟ್​ ಭಾಷಣದ ವೇಳೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
