ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ್ ಹಿರೇಮಠ್ ಅವರ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ದಿನ ಕಳೆದಂತೆ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಯುವತಿಯ ತಂದೆಗೆ ಸಿಎಂ ಸಿದ್ದರಾಮಯ್ಯ ಫೋನ್​ ಮಾಡಿ ಕ್ಷಮೆಯಾಚಿಸಿದ್ದಾರೆ.
ರಾಜ್ಯ ಸರ್ಕಾರದ ಪರವಾಗಿ ಕಾನೂನು ಸಚಿವ ಎಚ್​.ಕೆ. ಪಾಟೀಲ್​ ನೇಹಾ ತಂದೆ ನಿರಂಜನ್​ ಅವರನ್ನು ಭೇಟಿ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ನೇಹಾ ಕೊಲೆ ಪ್ರಕರಣನ್ನು ಸಿಐಡಿ ತನಿಖೆಗೆ ಒಪ್ಪಿಸಿದ್ದನ್ನು ಮತ್ತು ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿರುವುದಾಗಿ ಕುಟುಂಬಸ್ಥರಿಗೆ ತಿಳಿಸಿದರು.
ಇದನ್ನೂ ಓದಿ:ಈತ ಯಾವುದಕ್ಕೂ ಪ್ರಯೋಜನವಿಲ್ಲದವ; ಸ್ಟಾರ್​ ಆಟಗಾರನ ಬಗ್ಗೆ ಸೆಹ್ವಾಗ್​ ಹೀಗಂದಿದ್ಯಾಕೆ?
ಬಳಿಕ ಕುಟುಂಬದವರೊಂದಿಗೆ ಮಾತನಾಡುತ್ತ ಸಿಎಂ ಸಿದ್ದರಾಮಯ್ಯ ಕರೆ ಮಾಡಿದ ಸಚಿವ ಎಚ್.ಕೆ. ಪಾಟೀಲ್, ತಮ್ಮಿಬ್ಬರ ನಡುವೆ ಮಾತುಕತೆಯ ಪ್ರಕಾರ ನೇಹಾ ಕೊಲೆ ಪ್ರಕರಣದಲ್ಲಿ ಸರ್ಕಾರ ತೆಗೆದುಕೊಂಡಿರುವ ಎಲ್ಲ ಕ್ರಮಗಳನ್ನು ತಿಳಿಸಿದ್ದಾಗಿ ಹೇಳಿ ನಿಮ್ಮೊಂದಿಗೆ ನಿರಂಜನ್ ಮಾತಾಡುತ್ತಾರೆ ಅಂತ ತಮ್ಮ ಫೋನನ್ನು ಣೇಹಾ ತಂದೆಗೆ ಕೊಟ್ಟರು.
ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ನಿರಂಜನ್ ಹಿರೇಮಠ್, ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಐಡಿಗೆ ಒಪ್ಪಿಸಿದ್ದು ಮತ್ತು ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿದ್ದಕ್ಕೆ ಮುಖ್ಯಮಂತ್ರಿ ಅವರಿಗೆ ಧನ್ಯವಾದ ತಿಳಿಸಿದರು. ಕೊನೆಯಲ್ಲಿ ನಿರಂಜನ್​ ವೆರ ಸಾರಿ ಎಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕ್ಷಮೆಯಾಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − five =
Remember me
