ಶಿವಮೊಗ್ಗ:ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಮ್ಮ ಪಕ್ಷದ ಲೋಕಸಭಾ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್ ಪರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೀತಾರನ್ನು ಗೆಲ್ಲಿಸಿಕೊಡುವಂತೆ ಜಿಲ್ಲೆಯ ಮತದಾರರಲ್ಲಿ ಮನವಿ ಮಾಡಿದರು.
ಇದನ್ನೂ ಓದಿ:ವಿಜಯವಾಣಿ ಎಜುಕೇಶನ್​ ಎಕ್ಸ್​ಪೋ 2024: ಬೆಂಗಳೂರಿನಲ್ಲಿ ಮೇ 18- 19ರಂದು ಆಯೋಜನೆ
“ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ ರಾಜ್ಯದ ಪರವಾಗಿ, ಜಿಲ್ಲೆಯ ಪರವಾಗಿ ಪಾರ್ಲಿಮೆಂಟಿನಲ್ಲಿ ನೆಪಕ್ಕೂ ಬಾಯಿ ಬಿಡದ ಬಿ.ವೈ. ರಾಘವೇಂದ್ರ ಸಂಸದರಾಗಿದ್ದೇ ವೇಸ್ಟ್. ಬಿಜೆಪಿ ಪಕ್ಷದಿಂದ ಗೆದ್ದ 25 ಮಂದಿ ಸಂಸದರು ರಾಜ್ಯದ ಪರವಾಗಿ ಯಾವತ್ತೂ ಧ್ವನಿ ಎತ್ತಲಿಲ್ಲ. ಇಂಥವರನ್ನು ಗೆಲ್ಲಿಸಿ ನಿಮಗೆ, ರಾಜ್ಯಕ್ಕೆ ಅಥವಾ ಜಿಲ್ಲೆಗೆ ಏನಾದರೂ ಪ್ರಯೋಜವಾಗಿದೆಯಾ? ಇಲ್ಲ” ಎಂದರು.
“ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. 15 ಲಕ್ಷ ಕಪ್ಪು ಹಣ ತರಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಲಿಲ್ಲ. ಅಚ್ಚೇ ದಿನ್ ಬರಲಿಲ್ಲ. ದೇಶ ಹಾಗೂ ರಾಜ್ಯದ ಜನ ಬೆಲೆಯೇರಿಕೆ, ಹಣದುಬ್ಬರ ಜಾಸ್ತಿಯಾದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಸಾಲ ಮನ್ನಾ ಮಾಡಿ, ನ್ಯಾಯಯುತ ಬೆಲೆ ಕೊಡಿ, ಎಂ.ಎಸ್.ಪಿಗೆ ಕಾನೂನು ರೂಪಿಸಿ ಎಂದು ಹೋರಾಟ ಮಾಡಿದರೂ ಸಹ ಮೋದಿಯವರು ಜಗ್ಗಲಿಲ್ಲ” ಎಂದು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.
ಈತ ಕ್ರೀಸ್​ಗೆ ಬಂದ್ರೆ ಬೌಲರ್​ಗಳೇ ಬೆವರುತ್ತಾರೆ! ಅಜಯ್​ ಜಡೇಜಾ ಹೆಸರಿಸಿದ ಸ್ಟಾರ್​ ಬ್ಯಾಟ್ಸ್​ಮನ್ ಇವರೇ

ಡರೈಲ್​ ಮಿಚೆಲ್​ಗೆ ಕ್ರೀಸ್​ ಕೊಡಲಿಲ್ಲ ಅನ್ನೋದಕ್ಕೆ ಕಾರಣವಿದೆ! ಧೋನಿ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − six =
Remember me
