ಬೆಂಗಳೂರು:ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ. ಇದೇ ಭಾನುವಾರ (ಜೂ.11) ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಲಿದ್ದಾರೆ.
ಚುನಾವಣೆಗೂ ಮುನ್ನ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಉಚಿತ ಗ್ಯಾರಂಟಿ ಯೋಜನೆಗಳನ್ನು ವಿಭಿನ್ನವಾಗಿ ಜಾರಿಗೆ ತರಲು ಸರ್ಕಾರ ಮುಂದಾಗಿದ್ದು, ಜೂ. 11ರಂದು ಮೊದಲ ಯೋಜನೆಗೆ ವಿಧಾನಸೌಧ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಅಂದು ಸಿಎಂ ಸಿದ್ದರಾಮಯ್ಯ ಅವರು ಕೆಲ ಕಾಲ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ​
ಇದನ್ನೂ ಓದಿ:ಬೆಂಗಳೂರು ಹಬ್ಬದಲ್ಲಿ ಕೊಳ್ಳೆ ಹೊಡೆದ ಕಿ’ಲೇಡಿ’; ಪ್ರತಿ ಪ್ಲಾಸ್ಟಿಕ್ ಖುರ್ಚಿಗೆ 50 ರೂ. ಬಾಡಿಗೆ | ಲೂಟಿ ಅನುಮಾನ
ವಿಧಾನಸೌಧಕ್ಕೆ ತೆರಳುವ ರೂಟ್ ನಂಬರ್ 43ರ ಬಸ್ಸಿನಲ್ಲಿ ಕೆಲಕಾಲ ಕಂಡಕ್ಟರ್ ಆಗಲಿರುವ ಸಿಎಂ ಸಿದ್ದರಾಮಯ್ಯ, ಖುದ್ದು ಮಹಿಳೆಯರಿಗೆ ಟಿಕೆಟ್ ವಿತರಿಸಲಿದ್ದಾರೆ. ಈ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ (ಎ.ಸಿ. ಬಸ್ ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
1. ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ (ಎಲ್ಲಾ ಅಂತರ ರಾಜ್ಯ ಸಾರಿಗೆ ಅನುಸೂಚಿಗಳನ್ನು ಹೊರತುಪಡಿಸಿ) ಈ ಯೋಜನೆ ಅನ್ವಯಿಸತಕ್ಕದ್ದು.
2. ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್ ಎ.ಸಿ. ಸ್ಲೀಪರ್ ಹಾಗೂ ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್‌ಗಳು) ಬಸ್​ಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ.
3. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲ ಬಸ್‌ಗಳಲ್ಲಿ (ಅಂತರರಾಜ್ಯ, ಎ.ಸಿ. ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಶೇ.50 ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು.
ಇದನ್ನೂ ಓದಿ:ಪ್ರತಿ ಲಾರಿಯಿಂದ 300 ರೂ. ವಸೂಲಿ: ASI ಸೇರಿ ಇಬ್ಬರು ಪೊಲೀಸರಿಗೆ ಶಾಕ್​ ಕೊಟ್ಟ ತುಮಕೂರು ಎಸ್ಪಿ
4. ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶ ಆಧರಿಸಿ ಭರಿಸಲಾಗುವುದು. ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್‌ ವಿತರಿಸುವ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು.
4. “ಶಕ್ತಿ ಸ್ಮಾರ್ಟ್ ಕಾರ್ಡ್‌ ವಿತರಿಸುವವರೆಗೆ ಭಾರತ ಸರ್ಕಾರ/ಕರ್ನಾಟಕ ಸರ್ಕಾರದ ಇಲಾಖೆ/ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸತಕ್ಕದ್ದು.
1 ಲಕ್ಷ ರೂ. ಬೇಕಂತೆ! ವಿಡಿಯೋ ರೆಕಾರ್ಡ್​ ಮಾಡಿದ್ದಕ್ಕೆ ಮಹಿಳಾ ಅಧಿಕಾರಿಯಿಂದ ಅನುಚಿತ ವರ್ತನೆ

ಡ್ರಗ್ಸ್ ದಂಧೆಗೆ ಖಾಕಿ ಖೆಡ್ಡಾ; ಗಡಿ ಚೆಕ್​ಪೋಸ್ಟ್​ಗಳಲ್ಲಿ ನಿಗಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 16 =
Remember me
