ಬೆಂಗಳೂರು:ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ-ಜೆಡಿಎಸ್​ ನಾಯಕರು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸುತ್ತಿರುವ ನಡುವೆಯೇ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಗುರುವಾರ (ಆಗಸ್ಟ್​ 22) ಸಭೆ ಕರೆಯಲಾಗಿದ್ದು, ’ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ರಾಜ್ಯಪಾಲರ ವಿರುದ್ಧ ಶಾಸಕಾಂಗ ಸಭೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಜತೆಗೆ ಮುಂದಿನ ಹೋರಾಟಗಳಿಗೆ ಶಾಸಕರ ಸಹಕಾರ ಕೋರಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಬಾಂಗ್ಲಾದೇಶವಾಗಿಸಲು ಹೆಚ್ಚಿನ ಸಮಯ ಹಿಡಿಯುವುದಿಲ್ಲ; ಅರೆಸ್ಟ್ ವೇಳೆ ಲೈಂಗಿಕ ಕಿರುಕುಳ ಆರೋಪಿ ಹೇಳಿಕೆ ವೈರಲ್
ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ನಡೆದುಕೊಳ್ಳುತ್ತಿದ್ದಾರೆ. ಬಿಜೆಪಿ ಹೇಳಿದ್ದನ್ನೇ ಮಾಡುತ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಬೇಕಿದ್ದರೆ ರಾಜ್ಯಪಾಲರೇ ರಾಜೀನಾಮೆ ನೀಡಲಿ ಎಂದು ಸಿಎಂ ಮುಗಿಬಿದ್ದಿದ್ದರು.
ರಾಜ್ಯಪಾಲರ ಈ ನಿರ್ಧಾರ ಸಿಎಂಗೆ ಮುಳುವಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದ್ದು, ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಈ ಪ್ರಕರಣ ಮುಂದೆ ಯಾವ ರೀತಿಯ ತಿರುವು ಪಡೆದುಕೊಳ್ಳಬಹುದು ಎಂಬ ವಿಚಾರ ತೀವ್ರ ಕುತೂಹಲ ಮೂಡಿಸಿದ್ದು, ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪನವರಿಗೆ ಎದುರಾದ ಪರಿಸ್ಥಿತಿ ಸಿದ್ದರಾಮಯ್ಯಗೆ ಬರುತ್ತದಾ ಎಂಬ ಪ್ರಶ್ನೆ ಮೂಡಲು ಶುರುವಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two + five =
Remember me
