ಮೈಸೂರು:ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ಧರಿಸುವುದನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ರಾಜ್ಯ ಸರ್ಕಾರ ಇನ್ನೂ ವಾಪಸ್​ ಪಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಕವಲಂದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾರೋ ಒಬ್ಬರು ಈ ಬಗ್ಗೆ ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರ ಕೊಟ್ಟಿದ್ದೇನೆ. ಹಿಜಾಬ್ ನಿಷೇಧ ವಾಪಾಸ್ ಬಗ್ಗೆ ಯೋಚನೆ ಮಾಡಿದ್ದೀವಿ. ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಪ್ರಧಾನಿ@narendramodiಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು@BJP4Indiaಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ.– ಮುಖ್ಯಮಂತ್ರಿ@siddaramaiah#Hijab
ಇದನ್ನೂ ಓದಿ:ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್; ಸಿಎಂ ಸಿದ್ದರಾಮಯ್ಯ ಟಿಪ್ಪುವಿನ ಎರಡನೇ ಅವತಾರ: ಬಸನ್​​ಗೌಡ ಪಾಟೀಲ್​ ಯತ್ನಾಳ್
ಇತ್ತ ಹಿಜಾಬ್​ ನಿಷೇಧದ ಆದೇಶ ವಾಪಸ್​ ಪಡೆಯುವ ಕುರಿತು ಸಿಎಂ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದಾರೆ. ಹೈಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದರು ಸಹ ಸಿಎಂ ಸಿದ್ದರಾಮಯ್ಯ ಈ ರೀತಿ ಮಾಡಿರುವುದು ಕಾನೂನಿಗೆ ವಿರುದ್ಧವಾದದ್ದು ಎಂದು ಬಿಜೆಪಿ ನಾಯಕರು ಕಿಡಿಕಾರಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಶುಕ್ರವಾರ ಸಂಜೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − sixteen =
Remember me
