ಬೆಂಗಳೂರು:ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ಭೀಕರ ಎನ್ನಲಾದ ರೈಲು ದುರಂತ ಒಡಿಶಾದ ಬಾಲೇಶ್ವರ ಸಮೀಪ ಇಂದು ಸಂಜೆ ಸಂಭವಿಸಿದ್ದು, 50 ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಇದೀಗ ದುರ್ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಶಾಲಿಮಾರ್-ಚೆನ್ನೈ ಕೊರೊಮಂಡಲ್ ಎಕ್ಸ್‌ಪ್ರೆಸ್ ರೈಲುಗಾಡಿಯ 10-12 ಕೋಚ್‌ಗಳು ಬಾಲೇಶ್ವರ ಸಮೀಪ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಪಕ್ಕದ ಇನ್ನೊಂದು ಹಳಿ ಮೇಲೆ ಬಿದ್ದು ಈ ಅಪಘಾತ ಸಂಭವಿಸಿದೆ. ಕೆಲ ಸಮಯದ ನಂತರ ಆ ಹಳಿಯ ಮೇಲೆ ಬಂದ ಯಶವಂತಪುರ- ಹೌರಾ ರೈಲು ಈ ಮೊದಲೇ ಹಳಿ ತಪ್ಪಿ ಬಿದ್ದಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಯಶವಂತಪುರ- ಹೌರಾ ರೈಲಿನ 3-4 ಬೋಗಿಗಳು ಹಳಿ ತಪ್ಪಿವೆ ಎಂದು ರೈಲ್ವೆ ಇಲಾಖೆಯ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.
ಭೀಕರ ರೈಲು ದುರಂತದಲ್ಲಿ ಐವತ್ತಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ನೂರಾರು ಜನ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರ 10 ಲಕ್ಷ ರೂಪಾಯಿ ಘೋಷಿಸಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಸಣ್ಣ ಪುಟ್ಟ ಗಾಯಗಳಾದವರಿಗೆ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
