ಬೆಂಗಳೂರು:ನಟಿ, ಖ್ಯಾತ ನಿರೂಪಕಿ ಅಪರ್ಣಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ:ಅಚ್ಚಕನ್ನಡದ ನಿರೂಪಕಿ, ಅಪರ್ಣಾ ವಸ್ತಾರೆ ಇನ್ನು ನೆನಪು ಮಾತ್ರ! ಹೇಗಿತ್ತು ನೋಡಿ ಬಣ್ಣದ ಲೋಕದ ಪಯಣ
ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.
ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ…pic.twitter.com/fZs9L6m42Q
— Siddaramaiah (@siddaramaiah)July 11, 2024
ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್‌ ಕಾಯಿಲೆಯಿಂದ ಅಪರ್ಣ ಇಂದು ಮೃತಪಟ್ಟಿದ್ದಾರೆ. ಅಪರ್ಣ ತಮ್ಮ ಬನಶಂಕರಿ ನಿವಾಸದಲ್ಲಿ ಕೊನೆಯಿಸಿರೆಳೆದಿದ್ದಾರೆ. ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನದ ಸುದ್ದಿ ಆಘಾತ ತಂದಿದೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ ಅವರಿಗೆ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ; ಕ್ಯಾನ್ಸರ್​ನಿಂದ ನಿಧನ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:5 × 5 =
Remember me
