ಬೆಂಗಳೂರು:ಪರಿಶಿಷ್ಟ ಜಾತಿ ಹಣವನ್ನು ಲೂಟಿ ಹೊಡೆದಿರುವ ಕರ್ನಾಟಕ ಸರ್ಕಾರವನ್ನು ನೀವು ಪ್ರಶ್ನಿಸಬೇಕು ಎಂದು ವಿತ್ತ ಸಚಿವೆ ನೀಡಿದ್ದ ಹೇಳಿಕೆಗೆ ಸಿಡಿಮಿಡಿಗೊಂಡಿರುವ ಸಿಎಂ ಸಿದ್ದರಾಮಯ್ಯ, ಎಸ್​ಸಿ.ಎಸ್ಪಿ / ಟಿಎಸ್ಪಿ ಯೋಜನೆ ಜಾರಿಗೆ ಕೊಟ್ಟು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನ ಅಭಿವೃದ್ಧಿ ಅನುದಾನದಲ್ಲಿ ಮೀಸಲಿಟ್ಟಿದ್ದು ನಾವು. ನ್ಯಾ. ಎಚ್.ಎನ್. ನಾಗಮೋಹನ್ ದಾಸ್ ಸಮಿತಿ ಶಿಫಾರಸಿನ ಅನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ 17ಕ್ಕೆ ಮತ್ತು ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ ಹೆಚ್ಚಿಸಿದ್ದೇವೆ ಎಂದು ಹೇಳುವ ಮೂಲಕ ಖಡಕ್​ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ಎಸ್​ಸಿ, ಎಸ್​ಟಿ ಒಳಮೀಸಲಾತಿ ನೀಡುವ ಅಧಿಕಾರ ರಾಜ್ಯಗಳಿಗಿದೆ: ಸುಪ್ರೀಂಕೋರ್ಟ್​ ಮಹತ್ವದ ತೀರ್ಪು
“ಒಂದು ಕೋಟಿ ರೂಪಾಯಿ ವರೆಗಿನ ಸರ್ಕಾರಿ ಗುತ್ತಿಗೆಗಳಲ್ಲಿ ಎಸ್​ಸಿ ಮತ್ತು ಎಸ್​ಟಿ ಸಮುದಾಯದ ಗುತ್ತಿಗೆದಾರರಿಗೆ ಶೇ. 24.1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ಅನ್ವಯಿಸಲು ನಿರ್ಧರಿಸಲಾಗಿದೆ. ಎಸ್​ಸಿ/ಎಸ್​ಟಿ ಕುಟುಂಬಗಳಿಗೆ ಸರ್ಕಾರ ಮಂಜೂರು ಮಾಡಿದ ಜಮೀನುಗಳ ಅನಧಿಕೃತ ಪರಭಾರೆಯನ್ನು ತಡೆಯಲು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ” ಎಂದರು.
“ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಹಂಚಿಕೆಯಾಗುವ ಕೈಗಾರಿಕಾ ನಿವೇಶನಕ್ಕೆ ಶೇಕಡಾ 75ರಷ್ಟು ಸಹಾಯಧನ ನೀಡಲಾಗುತ್ತಿದೆ. ಇವೆಲ್ಲವೂ ಅನುಷ್ಠಾನಕ್ಕೆ ಬಂದಿರುವುದು ಕರ್ನಾಟಕದಲ್ಲಿ ಮಾತ್ರ. ಕಳೆದ ಹತ್ತು ವರ್ಷದಿಂದ ಕೇಂದ್ರದಲ್ಲಿ ಎಸ್​ಸಿ.ಎಸ್ಪಿ / ಟಿ.ಎಸ್.ಪಿ ಕಾಯ್ದೆ ಜಾರಿ ಮಾಡುವಂತೆ ಒತ್ತಾಯ ಮಾಡುತ್ತಲೇ ಇದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರ ಇದನ್ನು ತಿರಸ್ಕರಿಸುತ್ತಲೇ ಇದ್ದಾರೆ” ಎಂದು ಹೇಳಿದರು.
ಇದನ್ನೂ ಓದಿ:ಜೀವನದಲ್ಲಿ ಒಮ್ಮೆಯಾದ್ರೂ ಆ ಹೀರೋ ಜತೆ ನಟಿಸಬೇಕೆಂಬುದೇ ನನ್ನ ಆಸೆ: ಕೀರ್ತಿ ಸುರೇಶ್​ ಅಚ್ಚರಿ ಹೇಳಿಕೆ
“ದಲಿತ ಸಮುದಾಯದ ಬಗ್ಗೆ ದೊಡ್ಡ ದೊಡ್ಡ ಮಾತನಾಡುವ ಬಿಜೆಪಿ ನಾಯಕರ ದಲಿತ ಕಾಳಜಿ ಇದು. ಹೀಗಿದ್ದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ನಮ್ಮ ಸರ್ಕಾರವನ್ನು ಪ್ರಶ್ನಿಸುವುದು ನಾಚಿಕೆಗೇಡು” ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
