ಬೆಂಗಳೂರು: ಹೈಕೋರ್ಟ್ ನಿರ್ಬಂಧದ ಹೊರತಾಗಿಯೂ ದೌರ್ಜನ್ಯಕ್ಕೆ ಒಳಗಾಗಿರುವ ಬೆಳಗಾವಿಯ ಮಹಿಳೆಯನ್ನು ಭೇಟಿ ಮಾಡುವ ಮೂಲಕ ಬಿಜೆಪಿ ನಾಯಕರು ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬಿಜೆಪಿ ನಾಯಕರು ನ್ಯಾಯಾಲಯದ ಸೂಚನೆ ಉಲ್ಲಂಸಿರುವುದು ಮಾತ್ರ ಅಲ್ಲ, ತಮ್ಮ ಅಸೂಕ್ಷ್ಮತೆಯನ್ನು ಮೆರೆದಿದ್ದಾರೆ. ಸಂತ್ರಸ್ತ ಮಹಿಳೆಯು ಮಾನಸಿಕ ಆಘಾತದಲ್ಲಿರುವ ಈ ಸಂದರ್ಭದಲ್ಲಿ ಆಕೆಯ ಭೇಟಿಗೆ ಅಗಮಿಸುವವರನ್ನು ನಿರ್ಬಂಧಿಸಬೇಕು ಎಂದು ಹೈಕೋರ್ಟ್ ಮುಖ್ಯನ್ಯಾಯಾಧೀಶರು ಸ್ವಯಂಪ್ರೇರಿತರಾಗಿ ಸೂಚಿಸಿದ್ದರು. ರಾಜಕೀಯ ನಾಯಕರು ಸಂತ್ರಸ್ತ ಮಹಿಳೆಯನ್ನು ಭೇಟಿಯಾಗುವ ಸುದ್ದಿಯ ಹಿನ್ನೆಲೆಯಲ್ಲಿಯೇ ಮುಖ್ಯನ್ಯಾಯಾಧೀಶರು ಈ ಸೂಚನೆ ನೀಡಿರುವುದು ಗಮನಾರ್ಹ.
ಮಹಿಳೆಯು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಂದರ್ಶಕರ ಭೇಟಿಯು ಆಕೆಯ ಆರೋಗ್ಯ ಹಾಗೂ ಚಿಕಿತ್ಸೆಯ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ ಮಹಿಳೆಯ ಹಿತದೃಷ್ಟಿಯಿಂದ ಸಂದರ್ಶಕರ ಭೇಟಿಯನ್ನು ನಿರ್ಬಂಧಿಸುವುದು ಅಗತ್ಯ ಎಂದು ತಾನು ಭಾವಿಸುವುದಾಗಿ ಹೈಕೋರ್ಟ್ ಹೇಳಿದೆ.ಯಾವುದೇ ವ್ಯಕ್ತಿ, ಸಮೂಹ, ಗುಂಪು, ಸಂಘಟನೆ, ರಾಜಕೀಯ ಪಕ್ಷಗಳು ಹಾಗೂ ಇನ್ನಿತರರು ಮಹಿಳೆಯ ಚಿಕಿತ್ಸೆಯ ಹೊಣೆ ಹೊತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯವರ ಪೂರ್ವ ಲಿಖಿತ ಅನುಮತಿ ಇಲ್ಲದೇ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಬಾರದು ಎಂದು ಹೈಕೋರ್ಟ್ ಆದೇಶಿಸಿತ್ತು.
ಒಂದು ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ. ಸಂತ್ರಸ್ತೆಯ ಸೂಕ್ಷ್ಮ ಮಾನಸಿಕ ಸ್ಥಿತಿಯ ಬಗ್ಗೆ ಎಳ್ಳಷ್ಟೂ ಗೌರವವಿಲ್ಲದ ಸಂವೇದನಾಶೂನ್ಯ ಬಿಜೆಪಿ ನಾಯಕರು ಹಾಗೂ ಅವರ ಬೆನ್ನಿಗೆ ನಿಂತು ಚಿತಾವಣೆ ನಡೆಸುತ್ತಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಡೆ-ನುಡಿಯನ್ನು ನಾಗರಿಕ ಸಮಾಜ ಖಂಡಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
