ಬೆಂಗಳೂರು:ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಬೆಂಗಳೂರು ವಕೀಲರ ಸಂಘ ಬ್ಯಾಂಕ್ವೆಟ್ ಹಾಲ್​ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ಧಾರೆ.
ಇದನ್ನೂ ಓದಿ:ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಯಾವುದೇ ಚರ್ಚೆಯಾಗಿಲ್ಲ: ಜಗದೀಶ್​ ಶೆಟ್ಟರ್​
ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ವಕೀಲ ಸಮೂಹ ಈ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟಿಸಿದ್ದರು. ಈ ಪ್ರತಿಭಟನೆಗೆ ನಾನೂ ಬೆಂಬಲ ಸೂಚಿಸಿ ವಿಧಾನಸಭೆಯಲ್ಲಿ ವಕೀಲ ಸಮೂಹದ ಪರವಾಗಿ ಧ್ವನಿ ಎತ್ತಿದ್ದೆ. ಈಗ ನಾವೇ ಅಧಿಕಾರಕ್ಕೆ ಬಂದಿದ್ದೇವೆ. ಈಗ ಈ ಕಾಯ್ದೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಬದ್ದವಾಗಿದ್ದೇವೆ ಎಂದು ಆಶ್ವಾಸನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ವಕೀಲರ ಸಂಘದ ಸದಸ್ಯರು “ವಕೀಲರ ವಿಮೆ ಯೋಜನೆಯನ್ನೂ ಜಾರಿಗೆ ತರುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದಸಿಎಂ ಈ ಬಗ್ಗೆಯೂ ಸಮಗ್ರವಾಗಿ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 7 =
Remember me
