ಬೆಂಗಳೂರು:ರಾಜ್ಯ ವಿಧಾನಸಭಾ ಚುನಾವಣೆ ಬಳಿಕ ಕಾಂಗ್ರೆಸ್​ ಬೆಂಗಳೂರು ಅಧಿಕಾರದ ಚುಕ್ಕಾಣಿ ಹಿಡಿಯುವ ತವಕದಲ್ಲಿದ್ದು, ಬಿಬಿಎಂಪಿ ಚುನಾವಣೆ ಮೇಲೆ ಕಾಂಗ್ರೆಸ್​ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಮಾಜಿ ಮೇಯರ್ ಹಾಗೂ ಕಾರ್ಪೊರೇಟರ್‌ಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಭೆ ನಡೆಸಿದರು.
ಸಭೆಯಲ್ಲಿ ಬೆಂಗಳೂರು ವಿಭಜನೆ ಮಾತುಕತೆ ನಡೆದಿದೆ. ಬೃಹತ್ ಬೆಂಗಳೂರನ್ನು ಮೂರು ವಲಯಗಳನ್ನಾಗಿ ವಿಂಗಡಿಸಿದರೆ ಹೇಗೆ? ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿ, ಕಾಂಗ್ರೆಸ್​ನ ಮಾಜಿ ಮೇಯರ್ ಹಾಗೂ ಕಾರ್ಪೊರೇಟರ್‌ಗಳ ಸಲಹೆ ಕೇಳಿದರು.
ಇದನ್ನೂ ಓದಿ:16 ಸಾವಿರಕ್ಕೂ ಹೆಚ್ಚು ಹೃದಯ ಸಂಬಂಧಿತ ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯ ಹೃದಯಾಘಾತದಿಂದ ಸಾವು
ಇಡೀ ಬೃಹತ್ ಬೆಂಗಳೂರಿಗೆ ಒಬ್ಬರೇ ಮೇಯರ್ ಇರುವುದರಿಂದ ಆಡಳಿತಾತ್ಮಕವಾಗಿ ನಿಭಾಯಿಸುವುದು ಕಷ್ಟ. ಮೂವರು ಮೇಯರ್ ಹಾಗೂ ಆಯುಕ್ತರಿದ್ದರೆ ಆಡಳಿತ ನಿರ್ವಹಿಸಬಹುದು. ಅಧಿಕಾರಿಗಳು ತಮಗೆ ನೀಡಿರುವ ವರದಿಯಲ್ಲಿ ಇದನ್ನು ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್​ನ ಮಾಜಿ ಕಾರ್ಪೋರೇಟರ್‌ಗಳು, ಯಾವುದೇ ಕಾರಣಕ್ಕೂ ಈ ರೀತಿಯ ಪ್ರಯೋಗಕ್ಕೆ ಕೈಹಾಕುವುದು ಬೇಡ ಎಂದು ಸಲಹೆ ನೀಡಿದ್ದಾರೆ.
ಬಿಬಿಎಂಪಿಗೆ ಕಾರ್ಪೊರೇಟರ್​ಗಳು ಇಲ್ಲದೆ ಅಭಿವೃದ್ಧಿ ಕುಂಠಿತವಾಗಿದೆ. ದಯವಿಟ್ಟು ಮೊದಲು 198 ವಾರ್ಡ್​ಗಳಿಗೆ ಚುನಾವಣೆ ನಡೆಸಿ, ಹೇಗಿದ್ದರೂ ನಮ್ಮದೇ ಪಕ್ಷ ಅಧಿಕಾರದಲ್ಲಿದೆ. ಬಿಬಿಎಂಪಿ ಚುಕ್ಕಾಣಿಯನ್ನೂ ನಾವೇ ಹಿಡಿಯಲು ಸಹಕಾರಿಯಾಗಲಿದೆ ಎಂದು ಮಾಜಿ ಮೇಯರ್​ಗಳು ಹೇಳಿದ್ದಾರೆ. ಆದರೆ, ಎಲ್ಲ 243 ವಾರ್ಡ್‌ಗಳಿಗೂ ಚುನಾವಣೆ ನಡೆಯಬೇಕಿದೆ ಎಂದು ಅಧಿಕಾರಿಗಳು ಹೇಳಿದರೆ, ಮಾಜಿ ಮೇಯರ್​ಗಳು ಮಾತ್ರ ಇದಕ್ಕೆ ಒಪ್ಪಲು ತಯಾರಿಲ್ಲ.
ಇದನ್ನೂ ಓದಿ:ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್: ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪರಿಸ್ಥಿತಿ ಉದ್ವಿಗ್ನ
ಸದ್ಯಕ್ಕೆ 198 ವಾರ್ಡ್​ಗಳಿಗೆ ಚುನಾವಣೆ ನಡೆಯಲಿ ಎಂದು ಮಾಜಿ ಮೇಯರ್​ಗಳು ಒತ್ತಾಯ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅಂತಿಮವಾಗಿ ಕಾನೂನು ತೊಡಕುಗಳನ್ನು ನಿವಾರಿಸಿ ಚುನಾವಣೆ ನಡೆಸೋಣ ಎಂದು ಸಭೆಯಲ್ಲಿ ಹೇಳಿದ್ದಾರೆ.
ಟ್ರ್ಯಾಕ್ಟರ್​ ವಾಟರ್​ ಟ್ಯಾಂಕರ್ ಹರಿದು​ ಬಾಲಕ ಸಾವು: ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಆರೋಪ

ಉಚಿತ ವಿದ್ಯುತ್​ ಪಡೆಯಲು ಷರತ್ತುಗಳು ಅನ್ವಯ: ಸಚಿವ ಜಾರ್ಜ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
