ಬೆಂಗಳೂರು:ಪರಿಸರದ ಸಮಸ್ಯೆಯನ್ನು ನಿಯಂತ್ರಿಸಲು, ಜನರಲ್ಲಿ ಜಾಗೃತಿ ಮೂಡಿಸಲು ವಿಶ್ವಾದಾದ್ಯಂತ ಪರಿಸರ ದಿನಾಚರಣೆ ಆಚರಿಸುತ್ತಿದ್ದೇವೆ. ಪ್ರಕೃತಿ ಚೆನ್ನಾಗಿದ್ದರೆ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಪ್ರತಿಯೊಬ್ಬರೂ ನಮ್ಮ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ನಾವು ಎಷ್ಟೇ ಕಾನೂನು ಮಾಡಿದರೂ, ಜನರಲ್ಲಿ ಜಾಗೃತಿ ಮೂಡದಿದ್ದರೆ ಉದ್ದೇಶ ಸಫಲವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಿಎಂ ಸಿದ್ದರಾಮಯ್ಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ 2023 ಅನ್ನು ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿದರು.
ಇದನ್ನೂ ಓದಿ:ಹಾವನ್ನೇ ಜಗಿದು ಕೊಂದ ಮೂರು ವರ್ಷದ ಬಾಲಕ! ಗಾಬರಿಗೊಂಡ ಪಾಲಕರು
ಪರಿಸರ ಉಳಿಸುವುದು, ಕಾಡು ಬೆಳೆಸುವುದು ಕೇವಲ ಅರಣ್ಯ ಇಲಾಖೆಯ ಕರ್ತವ್ಯವಲ್ಲ. ಪ್ರತಿಯೊಬ್ಬರ ಜವಾಬ್ದಾರಿ ಕೂಡ ಹೌದು. ಪ್ರಕೃತಿಯ ಪ್ರಯೋಜನವನ್ನು ಪಡೆಯುತ್ತಿರುವ ಪ್ರತಿಯೊಬ್ಬರ ಮೇಲೂ ಪರಿಸರ ಉಳಿಸುವ ಜವಾಬ್ದಾರಿ ಇದೆ. ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿಯನ್ನು ನಾಶ ಮಾಡುವುದು ನಮ್ಮನ್ನು ನಾವು ನಾಶ ಮಾಡಿಕೊಂಡಂತೆ. ಹೀಗಾಗಿ ಪರಿಸರದ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಬದುಕಿನಲ್ಲಿ ಬಹಳಷ್ಟು ಜನರು ಪ್ರಕೃತಿಯ ಬಗ್ಗೆ ಪ್ರೀತಿ ಬೆಳೆಸಿಕೊಂಡಿದ್ದಾರೆ. ಪ್ರತಿಯೊಬ್ಬರೂ ಪ್ರಕೃತಿ, ಭೂಮಿ ತಾಯಿಯನ್ನು ಪ್ರೀತಿಸುವುದು ಕರ್ತವ್ಯ ಎಂದು ಬಾವಿಸಬೇಕು. ಈ ಭೂಮಿ ಉಪಯೋಗಿಸಿಕೊಂಡು ನಾವು ಬದುಕುತ್ತಿದ್ದೇವೆ. ಹೀಗಾಗಿ ಪರಿಸರವನ್ನು ಆರೋಗ್ಯಕರವಾಗಿ ಇಟ್ಟುಕೊಳ್ಳಬೇಕು. ಪ್ರಕೃತಿ ಆರೋಗ್ಯಕರವಾಗಿದ್ದರೆ ಮಾತ್ರ, ನಾವು ಆರೋಗ್ಯಕರವಾಗಿ ಬದುಕಲು ಸಾಧ್ಯ.
ಇದನ್ನೂ ಓದಿ:10 ವರ್ಷಗಳ ನಂತರ ಅಪ್ಪ-ಮಗ ಒಂದಾಗಲು ವೇದಿಕೆಯಾಯ್ತು ಅನ್ನದಾನ ಕಾರ್ಯಕ್ರಮ!
ನಮ್ಮ ಪೂರ್ವಿಕರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿದ್ದರು. ಹಿಂದೆಲ್ಲ ಒಂದು ಮರ ಕಡಿದರೆ, ಮತ್ತೊಂದು ಗಿಡ ನೆಡುತ್ತಿದ್ದರು. ಪ್ರಸ್ತುತ ದಿನಗಳಲ್ಲಿ ಹೆಚ್ಚು ಕಾಡು ಬೆಳೆಸಬೇಕು. ಇದರಿಂದ ಪ್ರಕೃತಿ ವಿಕೋಪಗಳ ಸಂಖ್ಯೆ ಕಡಿಮೆ ಮಾಡಬಹುದು. ಇದು ಕೇವಲ ಅಧಿಕಾರಿಗಳ ಕೆಲಸ ಮಾತ್ರವಲ್ಲ, ಜನರ ಜವಾಬ್ದಾರಿಯು ಇದೆ. ಪ್ರಕೃತಿಯಿಂದ ಆಗುವ ಅನಾಹುತವನ್ನು ನಾವು ತಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
