ಬೆಂಗಳೂರು:ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಪ್ರೋತ್ಸಾಹ ಧನ 1.50 ರೂ. ಕಡಿತ ಮಾಡಿ ಬೆಂಗಳೂರು ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಆದೇಶ ಹೊರಡಿಸಿತ್ತು.
ದರ ಕಡಿತ ಮಾಡಿರುವುದರ ವಿರುದ್ಧ ಹೈನುಗಾರರು ಅಸಮಾಧಾನ ವ್ಯಕ್ತ ಪಡಿಸಿದ್ದರು. ಇದೀಗ ಕರ್ನಾಟಕ ಹಾಲು ಮಹಾ ಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಿಎಂ ಚರ್ಚೆ ನಡೆಸಿ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಒಡಿಶಾ ರೈಲು ದುರಂತ: ತಜ್ಞರ ಸಮಿತಿಯಿಂದ ಸೂಕ್ತ ತನಿಖೆ ಕೋರಿ ಸುಪ್ರೀಂಗೆ ಪಿಐಎಲ್​ ಸಲ್ಲಿಕೆ
ಬೇಸಿಗೆ ಸಮಯದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾದ ಹಿನ್ನೆಲೆಯಲ್ಲಿ ಪ್ರತಿ ಲೀಟರ್​ಗೆ 2.85 ರೂಪಾಯಿ ಪ್ರೋತ್ಸಾಹ ಧನ ಘೋಷಿಸಲಾಗಿತ್ತು. ಇದೀಗ ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿರುವುದರಿಂದ ಹಸಿರು ಮೇವಿನ ಸಮಸ್ಯೆ ಬಗೆಹರಿದಿದೆ. ಇದರಿಂದ ಹಾಲು ಉತ್ಪಾದನೆಯಲ್ಲೂ ಹೆಚ್ಚಳವಾಗಿದೆ. ಹೀಗಾಗಿ ಪ್ರೋತ್ಸಾಹ ಧನ ಕಡಿತಗೊಳಿಸಲು ನಿರ್ಧಾರ ಮಾಡಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + seven =
Remember me
