ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಎಸ್‌.ಸಿ.ಎಸ್‌.ಪಿ./ ಟಿ.ಎಸ್.ಪಿ. ಅಡಿ 34,293.69 ಕೋಟಿ ರೂ. ಗಳ ಕ್ರಿಯಾ ಯೋಜನೆ ಅನುಮೋದನೆ ನೀಡಲಾಗಿದೆ.
ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಸಿಎಂ ಎಸ್‌.ಸಿ.ಎಸ್.ಪಿ./ ಟಿ.ಎಸ್.ಪಿ. ಅನುದಾನ ಖರ್ಚು ಮಾಡದಿದ್ದರೆ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಯ್ದೆ ಹೇಳುತ್ತದೆ. ಅದರಂತೆ ಯಾರು ನಿರ್ಲಕ್ಷ್ಯ ಮಾಡುತ್ತಾರೆ, ಅವರ ವಿರುದ್ಧ ಕಾಯ್ದೆಯನ್ವಯ ಕ್ರಮ ಕೈಗೊಳ್ಳುತ್ತೇನೆ ಎಂದು ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ ನೀಡಿದ್ದಾರೆ.
ಪ್ರತಿ ಇಲಾಖೆಯು ಎಸ್‌.ಸಿ.ಎಸ್.ಪಿ. / ಟಿ.ಎಸ್.ಪಿ. ಯೋಜನೆಗಳ ಅನುಷ್ಠಾನದ ನಂತರ ಮೌಲ್ಯಮಾಪನ ವರದಿಯನ್ನೂ ಸಿದ್ಧಪಡಿಸಬೇಕು. ಫಲಾನುಭವಿಗಳ ಸ್ಥಿತಿಗತಿಯಲ್ಲಿ ಆಗಿರುವ ಬದಲಾವಣೆ ಕುರಿತು ಮಾಹಿತಿ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.
ಮುಖ್ಯಮಂತ್ರಿ@siddaramaiahಅವರು ಇಂದು 2023-24ನೇ ಸಾಲಿನ ಎಸ್‌.ಸಿ.ಎಸ್‌.ಪಿ./ ಟಿ.ಎಸ್.ಪಿ. ಕ್ರಿಯಾ ಯೋಜನೆ ಅನುಮೋದಿಸುವ ಕುರಿತ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆ ನಡೆಸಿ, ಚರ್ಚಿಸಿದರು.ಸಭೆಯಲ್ಲಿ ರಾಜ್ಯ ಅಭಿವೃದ್ಧಿ ಪರಿಷತ್ತಿನ ಉಪಾಧ್ಯಕ್ಷ ಹಾಗೂ ಸಮಾಜ ಕಲ್ಯಾಣ ಸಚಿವ@CMahadevappa,…pic.twitter.com/6YTCd5eAkZ
ಹಿಂದಿನ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ಧಿಗಾಗಿ ಎಸ್‌.ಸಿ.ಎಸ್.ಪಿ/ ಟಿ.ಎಸ್.ಪಿ. ಅಧಿನಿಯಮ 2013 ಮತ್ತು ನಿಯಮ 2017ಅನ್ನು ಜಾರಿಗೆ ತರಲಾಗಿದೆ. ಇದರನ್ವಯ ಅಭಿವೃದ್ಧಿ ಯೋಜನೆಗಳಿಗೆ ಹಂಚಿಕೆ ಮಾಡಿರುವ ಅನುದಾನದ ಶೇ. 24.10 ರಷ್ಟು ಮೊತ್ತವನ್ನು ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಒದಗಿಸಲಾಗುತ್ತಿದೆ.
ಈ ಯೋಜನೆಯ ಅನುದಾನ ನೇರವಾಗಿ ಈ ಸಮುದಾಯಗಳಿಗೇ ತಲುಪಬೇಕು ಎಂಬ ಉದ್ದೇಶದಿಂದ ಕಾಯ್ದೆ ರೂಪಿಸಲಾಗಿದೆ. ಆದ್ದರಿಂದ ಈ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಎರಡು ಬಾರಿ ಸಿಎಂ ಆದ ಸಿದ್ದರಾಮಯ್ಯಗೆ ಮೈಸೂರಿನಲ್ಲಿ ಮೊದಲ ಮನೆ
• ಪ್ರಸಕ್ತ ಸಾಲಿನಲ್ಲಿ ರಾಜ್ಯದ ಒಟ್ಟು ಆಯವ್ಯಯ ಗಾತ್ರ 3.28 ಲಕ್ಷ ಕೋಟಿ ರೂ. ಆಗಿದ್ದು, ಇದರಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನಿಗದಿ ಪಡಿಸಿದ ಆಯವ್ಯಯ 1.42 ಲಕ್ಷ ಕೋಟಿ ರೂ. ನಷ್ಟಿದೆ.
• ಇದರಲ್ಲಿ ಎಸ್‌.ಸಿ.ಎಸ್‌.ಪಿ./ ಟಿ.ಎಸ್‌.ಪಿ. ಗೆ 24.10% ಅನುದಾನ ಅಂದರೆ ಒಟ್ಟು 34,221.49 ಕೋಟಿ ರೂ. ಹಾಗೂ ಹಿಂದಿನ ವರ್ಷ ಬಳಕೆಯಾಗದ ಮೊತ್ತ 72.20 ಕೋಟಿ ರೂ. ಸೇರಿಸಿ, 34,293.69 ಕೋಟಿ ರೂ. ಅನುದಾನವನ್ನು ನೀಡಲಾಗಿದೆ. ಇದರಲ್ಲಿ ಶೇ. 84 ರಾಜಸ್ವ ಹಾಗೂ ಶೇ. 16 ಬಂಡವಾಳ ಮೇಲಣ ವೆಚ್ಚವಾಗಿದೆ ಎಂದು ಅಧಿಕಾರಿಗಳಿಂದ ಮಾಹಿತಿ.
• ಇಂದಿನ ಸಭೆಯಲ್ಲಿ ಎಲ್ಲ ಇಲಾಖೆಗಳ ಕಾರ್ಯಕ್ರಮಗಳ ವಿವರವಾದ ಕರಡು ಕ್ರಿಯಾ ಯೋಜನೆಯ ಕುರಿತು ಚರ್ಚಿಸಿ, ಅನುಮೋದನೆ ನೀಡಲಾಯಿತು.
• 2023-24 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ. / ಟಿ.ಎಸ್.ಪಿ. ಅಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ 5790.67 ಕೋಟಿ , ಇಂಧನ ಇಲಾಖೆಗೆ 5400.98 ಕೋಟಿ ರೂ., ಕಂದಾಯ ಇಲಾಖೆಗೆ 4041.78 ಕೋಟಿ ರೂ., ಪರಿಶಿಷ್ಟ ಜಾತಿ ಕಲ್ಯಾಣಕ್ಕೆ 3787.29 ಕೋಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ 2779.97 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಲಾಖೆಗೆ 2349.85 ಕೋಟಿ ರೂ., ವಸತಿ ಇಲಾಖೆಗೆ 1431.5 ಕೋಟಿ ರೂ., ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ 1387.35 ಕೋಟಿ ರೂ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ 1296.96 ಕೋಟಿ ರೂ., ಆರೋಗ್ಯ ಇಲಾಖೆಗೆ 1122.25 ಕೋಟಿ ರೂ. ಹಂಚಿಕೆ ಮಾಡಲಾಗಿದೆ.
• ಮುಂದುವರೆದ ಯೋಜನೆಗಳಿಗೆ 1897 ಕೋಟಿ ರೂ. ಈ ವರೆಗೆ ವೆಚ್ಚ ಮಾಡಲಾಗಿದೆ. ಮುಂದಿನ ಎಂಟು ತಿಂಗಳಲ್ಲಿ ಇಂದು ಅನುಮೋದಿಸಲಾದ ಕ್ರಿಯಾ ಯೋಜನೆಯನ್ವಯ ಯೋಜನೆ ಅನುಷ್ಠಾನ ಮಾಡಿ, 34293.69 ಕೋಟಿ ರೂ. ಅನುದಾನ ಸಂಪೂರ್ಣ ವೆಚ್ಚ ಮಾಡಬೇಕು ಎಂದು ಸೂಚಿಸಲಾಗಿದೆ.
• ಅನುದಾನದ ಸಂಪೂರ್ಣ ಸದ್ಬಳಕೆಗಾಗಿ ಅನುಮೋದಿಸಿದ ಕ್ರಿಯಾ ಯೋಜನೆಯಂತೆ ಅನುಷ್ಠಾನಗೊಳಿಸಲಾಗುವುದುಸಂಬಂಧಿಸಿದ ಇಲಾಖೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಅನುದಾನ ಉಳಿದರೆ, ಅದರ ಮರು ಹಂಚಿಕೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
• ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಯೋಜನಾ ಉಸ್ತುವಾರಿ ಕೋಶ ರಚನೆ ಪ್ರಸ್ತಾವನೆ ಮಾಡಲಾಗಿತ್ತು ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ಗಳ ಅತ್ಯುತ್ತಮ ನಿರ್ವಹಣೆಗೆ ಶ್ರೀಮತಿ ರೇಣುಕಾ ಚಿದಂಬರಂ ಅಧ್ಯಕ್ಷತೆಯ ಸಮಿತಿಯು ಸಲ್ಲಿಸಿರುವ ವರದಿಯನ್ನು ಪರಿಗಣಿಸುವಂತೆ ಪರಿಷತ್‌ ನ ಸದಸ್ಯರು ಸಲಹೆ ನೀಡಿದ್ದಾರೆ.
• ಇದರಲ್ಲಿ ಹಳ್ಳಿಗಾಡಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶ. ವಸತಿ ಶಾಲೆಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ. 60 ಹಾಗೂ ಹೊರಗಿನ ವಿದ್ಯಾರ್ಥಿಗಳಿಗೆ ಶೇ. 40 ರಷ್ಟು ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಮಾಡಲು ಸೂಚಿಸಲಾಗಿದೆ.
• ಪರಿಶಿಷ್ಟ ಜಾತಿ, ಪಂಗಡದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯ ಸೌಲಭ್ಯ ಕಲ್ಪಿಸಬೇಕು. ಯಾವುದೇ ಕಾರಣಕ್ಕೆ ದಲಿತರ ಮಕ್ಕಳು drop out ಆಗಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
• ದಲಿತರಿಗೆ ಎಲ್ಲೆಲ್ಲಿ ರುದ್ರಭೂಮಿ ಬೇಡಿಕೆ ಇದೆಯೊ ಅಲ್ಲಿ ರುದ್ರಭೂಮಿ ಒದಗಿಸಬೇಕು. ಹಾಸ್ಟೆಲ್‌ ಮತ್ತು ವಸತಿ ಶಾಲೆಗಳಿಗೆ ಆದ್ಯತೆ ಮೇರೆಗೆ ಜಾಗ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲು ಮುಖ್ಯ ಕಾರ್ಯದರ್ಶಿಗಳಿಗೆ ಸಭೆಯಲ್ಲಿ ಸಿಎಂ ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 15 =
Remember me
