ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ವೀಕ್ ಆಗಿಲ್ಲ. ಅವರಿಗೆ ಅಪ್ಪಿ ತಪ್ಪಿ ಆ ಮಾತು ಅನ್ವಯವಾಗುವುದಿಲ್ಲ. ಈ ಬಗ್ಗೆ ಬಸವರಾಜ ಬೊಮ್ಮಾಯಿ ಹೇಳಿಕೆಯಲ್ಲಿ ಹುರುಳಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ಸಿದ್ದರಾಮಯ್ಯ ಈಗ ಬಹಳ ವೀಕ್ ಆಗಿದ್ದಾರೆ. ಮೊದಲಿನ ಹಾಗೆ ಸಿಡಿದೇಳುತ್ತಿಲ್ಲ ಎಂಬ ಬೊಮ್ಮಾಯಿ ಹೇಳಿಕೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.
ಸಿದ್ದರಾಮಯ್ಯ ಯಾವಾಗಲೂ ಫುಲ್ ಆ್ಯಕ್ಟೀವ್ ಆಗಿಯೇ ಇರುತ್ತಾರೆ. ಬಸವರಾಜ ಬೊಮ್ಮಾಯಿ ವೀಕ್ ಆಗಿದ್ದಾರೆ ಎಂದು ತಿರುಗೇಟು ನೀಡಿದರು. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಲಿದ್ದಾರೆ ಎಂದು ಭಾವಿಸಿದ್ದೆವು. ಆದರೆ ರಾಜ್ಯಕ್ಕೆ ಬೊಮ್ಮಾಯಿ ಅವರ ಕೊಡುಗೆ ಶೂನ್ಯ. ಪ್ರಮುಖ ವಿಪಕ್ಷವಾಗಿ ಬಿಜೆಪಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಕೇವಲ ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಸೋತ ಮೇಲೆ ದಲಿತರ ಮೇಲೆ ಕಳಕಳಿ:ಬಿಜೆಪಿಗರು ತಮ್ಮ ಆಡಳಿತಾವಧಿಯಲ್ಲಿ ದಲಿತರ ಬಗ್ಗೆ ಯಾವುದೇ ಯೋಜನೆ ರೂಪಿಸಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಬಿಜೆಪಿಗೆ ದಲಿತರ ಬಗ್ಗೆ ಕಾಳಜಿ ಹೆಚ್ಚಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಹಣವನ್ನು ಎಲ್ಲೆಲ್ಲಿ ಬಳಕೆ ಮಾಡಬೇಕು ಎಂಬ ಅರಿವು ನಮ್ಮ ಸರ್ಕಾರಕ್ಕೆ ಇದೆ. ಈ ಎರಡು ಸಮುದಾಯಗಳ ಹಣ ಸದ್ಭಳಕೆ ಬಗ್ಗೆ ಸೂಕ್ತ ಕಾನೂನನ್ನು ತಂದಿದ್ದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಈ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗೆಯೋಗ್ಯತೆಇಲ್ಲ. ಹಿಂದೆ ಬಿಜೆಪಿ ಪರಿಶಿಷ್ಟರಿಗೆ ಮೀಸಲಿಟ್ಟ ಹಣವನ್ನು ಮೆಟ್ರೋಗೆ ಬಳಸಿಲ್ಲವೆ ಎಂದು ಕೇಳಿದರು.
ಕುಮಾರಸ್ವಾಮಿ ಹತಾಸೆಯ ಮಾತು:ವಿಧಾನಸಭೆ ಫಲಿತಾಂಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಟ್ಟುಕೊಂಡಿದ್ದ ಆಸೆಗೆ ಫಲಿತಾಂಶ ತಣ್ಣೀರು ಎರೆಚಿದಂತಾಗಿದೆ. ಹಾಗಾಗಿ ಹತಾಶೆಗೊಂಡು ಮಾತನಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ. ಜನ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್‌ಗೆ ಅವಕಾಶ ನೀಡಿದ್ದಾರೆ. ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಇದನ್ನು ಸಹಿಸಲು ಆಗದ ವಿಪಕ್ಷದ ನಾಯಕರು ಇಲ್ಲ, ಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + twenty =
Remember me
