–ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು
-ರಾಜ್ಯದ ಅಭಿವೃದ್ಧಿಯ ಜತೆಗೆ ಜನತೆಯ ಪ್ರಗತಿಯೂ ಆಗಬೇಕು
ಬೆಂಗಳೂರು:ಬಕ್ರೀದ್​​ ಹಬ್ಬದ ಪ್ರಯುಕ್ತ ನಗರದ ಚಾಮರಾಜ ಪೇಟೆಯಲ್ಲಿನ ಈದ್ಗಾ ಮೈದಾನದಲ್ಲಿ ನಡೆದ ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ.

ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರಿದ್ ಹಬ್ಬದ ಪ್ರಯುಕ್ತ ನಗರದ ಚಾಮರಾಜ ಪೇಟೆಯಲ್ಲಿನ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆ ನಡೆದಿದೆ. ಸಚಿವರಾದ ಜಮೀರ್ ಅಹಮದ್ ಖಾನ್ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಈ ವೇಳೆ ಮಾತನಾದಿದ ಸಿದ್ದರಾಮಯ್ಯ ಅವರು,  ನಾವೆಲ್ಲಾರೂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಇದನ್ನೂ ಓದಿ:ಆದಿಪುರುಷ್​​ ಸಿನಿಮಾಗೆ ಟಕ್ಕರ್​ ನೀಡಲು ಮುಂದಿನ ವಾರದಿಂದ ಟಿವಿಯಲ್ಲಿ ಮತ್ತೆ ಪ್ರಸಾರವಾಗಲಿದೆ ರಾಮಾಯಣ
ನಮ್ಮ ನಮ್ಮಲ್ಲೇ ದ್ವೇಷ ಹುಟ್ಟುಹಾಕುವ ಅನೇಕ ಶಕ್ತಿಗಳಿವೆ. ಆ ಶಕ್ತಿಗಳು ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡುತ್ತವೆ. ಅದಕ್ಕೆ ನಾವು ಸೊಪ್ಪು ಹಾಕುವುದಾಗಲಿ, ಮಹತ್ವ ನೀಡುವುದಾಗಲಿ ಮಾಡಬಾರದು. ಮನುಷ್ಯರು ಪ್ರೀತಿ, ವಿಶ್ವಾಸದಿಂದ, ಮನುಷ್ಯರಂತೆ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಿದೆ. ರಾಜ್ಯದ ಅಭಿವೃದ್ಧಿಯ ಜತೆಗೆ ಜನತೆಯೂ ಅಭಿವೃದ್ಧಿಯಾಗಬೇಕು. ದೇವರು ಎಲ್ಲರಿಗೂ ಸದ್ಭುದ್ದಿ ನೀಡಿ ಮನುಷ್ಯರಾಗಿ ಬಾಳುವ ಗುಣವನ್ನು ನೀಡಲಿ ಎಂದರು.

ತ್ಯಾಗದ ಸಂಕೇತ :ರಾಜ್ಯದ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಬಕ್ರೀದ್ ಹಬ್ಬ ತ್ಯಾಗದ ಸಂಕೇತ. ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿರುವುದಾಗಿ ತಿಳಿಸಿದರು.
ಟ್ರಿಪ್​​​​​​ಗೆ ಹೋದ ಹೆಂಡತಿ ಮನೆಗೆ ಬಂದಿಲ್ಲ, ಫ್ರೀ ಬಸ್ ಪ್ರಯಾಣ ರದ್ದುಗೊಳಿಸಿ ಎಂದ ಕುಡುಕ ಪತಿರಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 15 =
Remember me
