ಮೈಸೂರು:ಬಿಜೆಪಿ ಹಾಗೂ ಎನ್​ಡಿಎಗೆ ಅಲ್ಪಸಂಖ್ಯಾತರ ಮೇಲೆ ಕೋಪವಿದೆ. ಇದರಿಂದ ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಇದನ್ನೂ ಓದಿ:ದೆಹಲಿ: 20 ಲಕ್ಷ ರೂ. ಲಂಚ ಪಡೆಯುವಾಗ ಇ.ಡಿ ಸಹಾಯಕ ನಿರ್ದೇಶಕ ಸಿಬಿಐ ಬಲೆಗೆ
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ಕಾಯ್ದೆ ತಿದ್ದುಪಡಿಗೆ ಕೇದ್ರ ಸರ್ಕಾರ ಪ್ರಯತ್ನಿಸುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಎಂದಿಗೂ ಜಾತ್ಯಾತೀತತೆ, ಸಾಮಾಜಿಕ ನ್ಯಾಯದ ಪರವಾಗಿ ನಿಂತವರಲ್ಲ. ಬಿಜೆಪಿ ಮೊದಲಿನಿಂದಲೂ ಕೋಮುವಾದಿ ಪಕ್ಷವಾಗಿಯೇ ಗುರುತಿಸಿಕೊಂಡಿದ್ದು, ಜಾತ್ಯಾತೀತ ತತ್ವವನ್ನು ನಂಬುವುದಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
ಮತಾಂತರ ನಿಷೇಧ ಕಾನೂನು, ಗೋಹತ್ಯೆ ತಿದ್ದುಪಡಿಗಳನ್ನು ಜಾರಿಗೆ ತಂದ ಬಿಜೆಪಿಯವರು ಇಂದು ವಕ್ಫ್ ಬೋರ್ಡ್ ಕಾಯ್ದೆ ತಿದ್ದುಪಡಿ ಪ್ರಯತ್ನಕ್ಕೂ ಕೈಹಾಕಿದ್ದಾರೆ. ವಕ್ಫ್ ಬೋರ್ಡ್ ಕಾನೂನು ಆ ಸಮುದಾಯದ ವೈಯಕ್ತಿಕ ಕಾನೂನಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವುದು ಸಂವಿಧಾನ ಬಾಹಿರ. ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟ, ಕೇಂದ್ರದ ಈ ನಿಲುವನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದರು.
ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಆರ್ ಟಿ ಐ ಕಾರ್ಯಕರ್ತರು ಮುಖ್ಯಮಂತ್ರಿಗಳ ವಿರುದ್ಧ ದೂರು ದಾಖಲಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಸುಳ್ಳು ಕೇಸುಗಳನ್ನು ದಾಖಲಿಸಿದರೆ, ಅವು ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗುವುದಿಲ್ಲ ಎಂದರು.
ಬೆಂಗಳೂರು: ವಿಧಾನಸೌಧದಲ್ಲಿ ಸಚಿವ ಈಶ್ವರ್ ಖಂಡ್ರೆ ಅವರನ್ನ ಭೇಟಿಯಾದ ಪವನ್‌ ಕಲ್ಯಾಣ್‌; ಕಾರಣವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − two =
Remember me
