ಬೆಂಗಳೂರು:ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧನೆ ಕಾರ್ಯಕ್ರಮದಲ್ಲಿ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆದ ಘಟನೆ ನಡೆಯಿತು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಜಿ ಪ್ರಧಾನಿ ಹುತಾತ್ಮ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯ ಭಾಗವಾಗಿ ಆಚರಿಸುವ ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಪ್ರತಿಜ್ಞಾ ವಚನ ಬೋಧನೆ ಕಾರ್ಯಕ್ರಮವನ್ನು ಬೆಳಗ್ಗೆ 11ಕ್ಕೆ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನವಿತ್ತು. ಆದರೆ ಸಿಎಂ ಸಿದ್ದರಾಮಯ್ಯ ನಿಗದಿತ ಸಮಯಕ್ಕೆ ಬಂದು ಸಭಾಂಗಣದಲ್ಲಿ ಕುಳಿತರೆ, ಡಿಸಿಎಂ ಶಿವಕುಮಾರ್ ಆಗಮಿಸಲಿರಲಿಲ್ಲ.
ಆಗ, ಡಿಸಿಎಂ ಬರುತ್ತಾರೆ ಎಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ವಿರುದ್ಧ ಸಿಎಂ ಮೊದಲು ಗರಂ ಆದರು. ಬರಲಿ ಬಿಡಿ, ನೀವು ಶುರು ಮಾಡಿ ಎಂದರು.
ಆದಾದ ಬಳಿಕ ಮತ್ತೊಬ್ಬ ಉನ್ನತ ಅಧಿಕಾರಿ ಕೂಡ ಡಿಸಿಎಂ ಬರುತ್ತಿದ್ದಾರಂತೆ ಎಂದಾಗ ಸಿದ್ದರಾಮಯ್ಯ ಅವರು ಮತ್ತೆ ಗರಂ ಆದರು. ಅಯ್ಯೋ ಕತೆ ಆಯ್ತಲ್ರೀ, ಬಂದ್ರೆ ಬರ್ತಾರೆ, ಕಮ್ ಅಂಡ್ ಜಾಯ್ನ ಎಂದು ಕಾರ್ಯಕ್ರಮ ಶುರು ಮಾಡಿಸಿದರು. ಬಳಿಕ ವಿಧಾನಸೌಧದ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗಕ್ಕೆ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
