ಕಲಬುರಗಿ:ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಗೆ ಆಗಸ್ಟ್​ 05ರಂದು ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್​ ಚಾಲನೆ ನೀಡಿದ್ದಾರೆ.
ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಇದೊಂದು ಐತಿಹಾಸಿಕ ದಿನ. ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಬಣ್ಣಿಸಿದ್ದಾರೆ.
ಚುನಾವಣೆ ಪೂರ್ವದಲ್ಲಿ ನಾವು ಐದು ಗ್ಯಾರಂಟಿಗಳನ್ನು ಕೊಡುತ್ತೇವೆ ಎಂದು ಜನತೆಗೆ ವಾಗ್ದಾನ ಮಾಡಿದ್ದೆವು. ಅದರಂತೆ ಜನತೆ ನಮ್ಮನ್ನು ನಂಬಿ ಮತ ಹಾಕಿ ಅಧಿಕಾರ ನೀಡಿದ್ದಾರೆ. ಹಿಂದೆ ಕೂಡ ನಮ್ಮ ಸರ್ಕಾರದ ಅವಧಿಯಲ್ಲಿ ನಾವು ನುಡಿದಂತೆ ನಡೆದಿದ್ದೇವೆ ನಡೆದು ಕೊಟ್ಟ ಎಲ್ಲಾ ಭರವಸೆಯ ಕಾರ್ಯಕ್ರಮ ಪೂರೈಸಿದ್ದೇವೆ.
ಹಿಂದೆ ನಮ್ಮ ಸರ್ಕಾರ ನುಡಿದಂತೆ ನಡೆದಿದ್ದಕ್ಕೆ ಇಡೀ ರಾಜ್ಯದ ಜನ ನಮ್ಮ ಮೇಲೆ ನಂಬಿಕೆ ಇಟ್ಟು 135 ಸೀಟುಗಳನ್ನು ಗೆಲ್ಲಿಸಿದ್ದಾರೆ. ಹಾಗಾಗಿ ನಾನು ಈ ಮೂಲಕ ಹೈದರಾಬಾದ್ ಕರ್ನಾಟಕದ ಜನತೆಗೆ ನನ್ನ ಹಾಗೂ ಸರ್ಕಾರದ ಪರವಾಗಿ ಧನ್ಯವಾದಗಳನ್ನು ಹೇಳುತ್ತೇನೆ.
ನಾವು ಬಜೆಟ್​ನಲ್ಲಿ ಐದು ಗ್ಯಾರಂಟಿಗಳ ಜೊತೆಗೆ 76 ಯೋಜನೆಗಳನ್ನು ಸಹ ಜಾರಿ ಮಾಡಿದ್ದೇವೆ. ಮುಂದಿನ ಐದು ವರ್ಷಗಳಲ್ಲಿ ನಾವು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಿಎಂ ಹೇಳಿದ್ದಾರೆ.
ಇದನ್ನೂ ಓದಿ:ಜೈಲಿಂದ ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ರೌಡಿಶೀಟರ್​ ಹತ್ಯೆ
ಬಿಜೆಪಿಯವರು ನಮ್ಮ ಸರ್ಕಾರದ ಬಗ್ಗೆ ಗುಲ್ಲು ಹಬ್ಬಿಸಿದ್ದಾರೆ. ಪ್ರಧಾನಿ ಮೋದಿ ಅವರು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತೆ ಎಂದು ಹೇಳಿದ್ದಾರೆ. ಇವತ್ತು ದೇಶವನ್ನು ಆರ್ಥಿಕವಾಗಿ ದಿವಾಳಿ ಮಾಡಿರುವವರು ಯಾರಾದರು ಇದ್ದರೆ ಅದು ಬಿಜೆಪಿಯವರು. ನಿಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿರುವ ವೇಳೆ ದಿವಾಳಿ ಆಗುವಂತೆ ಮಾಡಿದ್ದು ನಿಮ್ಮವರೇ ಮೋದಿಜೀ ಎಂದು ಟಾಂಗ್​ ಕೊಟ್ಟಿದ್ದಾರೆ.
ರೈತರಿಗೆ, ಬಡವರಿಗೆ ಬಿಜೆಪಿಯವರು ಅನ್ಯಾಯ ಮಾಡಿದ್ದು, ಕರ್ನಾಟಕ ಆರ್ಥಿಕವಾಗಿ ಹಿಂದುಳಿಯೋದಕ್ಕೆ ಯಡಿಯೂರಪ್ಪ, ಬೊಮ್ಮಾಯಿ , ಮೋದಿಯೇ ಕಾರಣ. ಬಿಜೆಪಿಯವರು ಬಡವರ ವಿರೋಧಿಗಳು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಆರೋಪಿಸಿದ್ದಾರೆ.
ಅನ್ನಭಾಗ್ಯ ಯೋಜನೆ ಬಗ್ಗೆಯೂ ಸಹ ಗುಲ್ಲು ಎಬ್ಬಿಸಿದ್ದರು. ಬಿಜೆಪಿಯವರು ಬಡವರಿಗೆ ಕೊಡುವ ಅಕ್ಕಿಯಲ್ಲೂ ಸಹ ರಾಜಕೀಯ ಮಾಡುತ್ತಿದ್ದಾರೆ. ಕರ್ನಾಟಕ ಹಸಿವು ಮುಕ್ತ ರಾಜ್ಯ ಆಗಬೇಕು, ಯಾರು ಕೂಡ ಹಸಿವಿನಿಂದ ಮಲಗಬಾರದು ಎಂದು ನಾವು ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದೆವು. ಆದರೆ, ಕೇಂದ್ರ ಸರ್ಕಾರ ಅಕ್ಕಿ ಕೊಡದೆ ರಾಜಕೀಯ ಮಾಡುತ್ತಿದೆ.
ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ ಯೋಜನೆಯಡಿ ತಲಾ 7 ಕೆಜಿ ಅಕ್ಕಿ ಕೊಡುತ್ತಿದ್ದೆವು. ಆದರೆ, ಯಡಿಯೂರಪ್ಪ ಸಿಎಂ ಆದ ನಂತರ ಅದನ್ನು ನಾಲ್ಕು ಕೆಜಿಗೆ ಇಳಿಸಲಾಯಿತು. ಈಗ ಯಡಿಯೂರಪ್ಪನವರೇ ಅನ್ನಭಾಗ್ಯ ಯೋಜನೆಯಡಿ ಒಂದು ಕೆಜಿ ಕಡಿಮೆ ಕೊಟ್ಟರು ಹೋರಾಟ ಮಾಡುತ್ತೇವೆ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಿಎಂ ಪ್ರಶ್ನಿಸಿದ್ದಾರೆ.
ನಾವು ಕೊಡ್ತೇವೆ ಎಂದು ಹೇಳಿದ ಐದು ಕೆಜಿಯ ಅಕ್ಕಿಯ ದುಡ್ಡನ್ನು ಜನರ ಬ್ಯಾಂಕ್​ ಖಾತೆಗಳಿಗೆ ಹಾಕುತ್ತಿದ್ದೇವೆ. ಬೆಲೆ ಏರಿಕೆಯಿಂದ ಬಡವರು ತತ್ತರಿಸಿ ಹೋಗಿದ್ದಾರೆ. ಮೋದಿ ನೀವು ಜನರಿಂದ ದುಡ್ಡನ್ನು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದ್ದೀರಾ. ಆದರೆ, ನಾವು ಜನರಿಗೆ ದುಡ್ಡು ಕೊಡುವ ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಜ್ಯೋತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 − 1 =
Remember me
