ಹೊಸದಿಲ್ಲಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಇದನ್ನೂ ಓದಿ:ಕಾಂಗ್ರೆಸ್ ನ ಗೂಂಡಾಗಿರಿ ವಿರುದ್ಧ ರಾಜ್ಯವ್ಯಾಪಿ ಚಳವಳಿ; ಬಿಜೆಪಿ ತೀರ್ಮಾನ
ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ರಾಜ್ಯದಲ್ಲಿ 236ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ.
ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್‌ಡಿಆರ್‌ಎಫ್​​ನಿಂದ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ.
ಇದನ್ನೂ ಓದಿ:Gold, Silver Price; ಚಿನ್ನಾಭರಣ ಖರೀದಿ ಮಾಡುವವರಿಗೆ ಶುಭ ಸುದ್ದಿ..ಇಂದಿನ ಬೆಲೆ ಗಮನಿಸಿ..
ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರ ಅನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.
ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದು ಸಲ್ಲಿಸಲಾಗಿತ್ತು. ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌ಡಿಆರ್ಎಫ್ ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು.
ಇದನ್ನೂ ಓದಿ:BBKS10: ‘ಕಾರಣ ಕೊಡೋದು ಹಾಗಲ್ಲ…ಹೀಗೆ’! ಸ್ಪರ್ಧಿಗಳ ಮಧ್ಯೆ ಮಸಿ ನೀರಿನ ಜಿದ್ದಾಜಿದ್ದಿ
ಇದರಲ್ಲಿ ತುರ್ತು ಪರಿಹಾರದ 12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳಿಗೆ ತಿಳಿಸಿದ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
