ಬೆಂಗಳೂರು:ರಾಜ್ಯ ಬಜೆಟ್​ ಮಂಡನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಸಂದೇಶವೊಂದನ್ನು ರವಾನಿಸಿದ್ದು, ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ ಎಂದಿದ್ದಾರೆ.
ಟ್ವೀಟ್​ ಮಾಡಿರುವ ಸಿಎಂ ಸಿದ್ದು, ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ.
ಇದನ್ನೂ ಓದಿ:14ನೇ ಬಾರಿಗೆ ಬಜೆಟ್​ ಮಂಡನೆ ಮಾಡಲಿರುವ ಸಿದ್ದರಾಮಯ್ಯ; ಸಿಎಂಗೆ ಟಗರು ಗಿಫ್ಟ್!
ನನ್ನ ಹಿಂದಿನ ಎಲ್ಲ ಬಜೆಟ್​ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿಯೂ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ.
ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ,ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ.
ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ…
— Siddaramaiah (@siddaramaiah)July 7, 2023

ಕಾಂಗ್ರೆಸ್​ನ ಐದು ಗ್ಯಾರಂಟಿಗಳಿಗೆ ಸಂಪನ್ಮೂಲ ಸಂಗ್ರಹದ ಒತ್ತಡದ ನಡುವೆಯೇ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ಹದಿನಾಲ್ಕನೇ ಬಜೆಟ್​ನಲ್ಲಿ ಯಾವ ರೀತಿಯ ಸರ್ಕಸ್ ಮಾಡಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ಎಡಬಿಡದೆ ಹಣಕಾಸು ಇಲಾಖೆಯ ಸಭೆ ನಡೆಸಿರುವ ಸಿಎಂ ರಾಜ್ಯ ಸರ್ಕಾರದ ಹಣಕಾಸು ಪರಿಸ್ಥಿತಿ ನಿರ್ವಹಿಸುವ ಬಗೆ ನೋಡಲು ಅರ್ಥಶಾಸ್ತ್ರಜ್ಞರು ಸಹ ಕಾತರದಿಂದಿದ್ದಾರೆ.
ನಿಮ್ಮ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಗೆ ಹೆಚ್ಚು ಒತ್ತು ನೀಡಿ: ಶಾಸಕರಿಗೆ ಸಿಎಂ ಸಿದ್ದು ಕಿವಿಮಾತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
