ಧಾರವಾಡ:ರಾಜ್ಯ ಸರ್ಕಾರದ ಯೋಜನೆಗಳನ್ನು ಶ್ಲಾಘಿಸಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು, ಮಳಲಿ ಗ್ರಾಮದ ವಿದ್ಯಾರ್ಥಿನಿ ಆಶಾ ಪಾಟೀಲ್​ ಅವರನ್ನು ಮುಖ್ಯಮಂತ್ರಿಗಳು ಇಂದು ಖುದ್ದಾಗಿ ಭೇಟಿ ಮಾಡಿ, ಧನ್ಯವಾದ ತಿಳಿಸಿರುವುದು ಇದೀಗ ಅನೇಕರ ಗಮನ ಸೆಳೆದಿದೆ.
ಇದನ್ನೂ ಓದಿ:ಶ್ರೀರಂಗಪಟ್ಟಣದಲ್ಲಿ 12ನೇ ದಿನಕ್ಕೆ ಕಾಲಿಟ್ಟ ಹೋರಾಟ
ಪತ್ರದಲ್ಲಿ ಮೊಟ್ಟೆ ವಿತರಣೆ ವಿಸ್ತರಿಸಿದ್ದ ಬಗ್ಗೆ ಪ್ರತ್ಯೇಕವಾಗಿ ಉಲ್ಲೇಖಿಸಿ, ರಾಜ್ಯ ಸರ್ಕಾರದ ಇತರ ಯೋಜನೆಗಳನ್ನು ಬಾಲಕಿ ಶ್ಲಾಘಿಸಿದ್ದಾರೆ. ಇಂದು ಧಾರವಾಡದಲ್ಲಿ ನಡೆದ ಕೃಷಿ ಮೇಳ ಉದ್ಘಾಟನೆಗೆ ಆಗಮಿಸಿದ್ದ ಸಿಎಂ, ವಿದ್ಯಾರ್ಥಿನಿ ಆಶಾ ಅವರನ್ನು ಖುದ್ದಾಗಿ ಭೇಟಿ ಮಾಡಿ, ಧನ್ಯವಾದ ತಿಳಿಸಿದರು. ಈ ಕುರಿತು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್​ವೊಂದನ್ನು ಕೂಡ ಹಂಚಿಕೊಂಡಿದ್ದಾರೆ.
“ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ (ಮೊಟ್ಟೆ) ನೀಡುವುದೂ ಸೇರಿದಂತೆ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿ ಪತ್ರ ಬರೆದಿದ್ದ ಧಾರವಾಡ ಜಿಲ್ಲೆ, ಕುಂದಗೋಳದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಇಂದು ಭೇಟಿ ಮಾಡಿದೆ. ಕೃಷಿ ಮೇಳ ಉದ್ಘಾಟನೆಗೆ ಧಾರವಾಡಕ್ಕೆ ತೆರಳಿದ್ದ ವೇಳೆಯಲ್ಲಿ ವಿದ್ಯಾರ್ಥಿನಿಯನ್ನು ಭೇಟಿಯಾಗಿ ಮಾತನಾಡಿದ್ದು ನನಗೆ ಖುಷಿ ಕೊಟ್ಟಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ:ಭಾರತಕ್ಕೆ ಬೇಕಾಗಿದ್ದ ಮೋಸ್ಟ್​ ವಾಂಟೆಡ್​ ಭಯೋತ್ಪಾದಕನ ಹತ್ಯೆ
“ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳು, ವಿದ್ಯಾರ್ಥಿಸ್ನೇಹಿ ಕಾರ್ಯಕ್ರಮಗಳ ಮೂಲಕ ನಾಡಿನ ಜನತೆಗೆ ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸ್ವಾವಲಂಬಿ ಬದುಕಿನ ಕನಸಿಗೆ ಬೆಂಬಲವಾಗಿ ನಿಂತಿದೆ. ನಮ್ಮ ಈ ಯೋಜನೆಗಳ ಫಲಾನುಭವಿಯಾದ ಪುಟ್ಟ ಹುಡುಗಿಯೊಬ್ಬಳು ನನ್ನೊಂದಿಗೆ ಪತ್ರದ ಮೂಲಕ ತನ್ನ ಸಂತಸ ಹಂಚಿಕೊಂಡು, ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದ್ದಳು. ಪತ್ರ ಓದಿದಾಗಿಂದ ಆ ಮಗುವನ್ನು ಒಮ್ಮೆ ಭೇಟಿಯಾಗಬೇಕೆಂದು ಬಯಸಿದ್ದೆ, ಅದು ಇಂದು ಸಾಧ್ಯವಾಯಿತು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
“ಇಂತಹ ಮುಗ್ಧ ಮಕ್ಕಳ ಭವಿಷ್ಯದ ಕನಸುಗಳು ನಮ್ಮ ಸರ್ಕಾರದ ಕೈಗಳಲ್ಲಿ ಸುರಕ್ಷಿತವಾಗಿದೆ. ಈ ಮಕ್ಕಳ ಕನಸನ್ನು ನನಸು ಮಾಡುವುದು ನಮ್ಮ ಕರ್ತವ್ಯವೆಂದು ಭಾವಿಸಿ, ಆ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇವೆ” ಎಂದು ಬರೆದು ಪೋಸ್ಟ್​ ಮಾಡಿದ್ದಾರೆ.
‘ಸಪ್ತ ಸಾಗರದಾಚೆ ಎಲ್ಲೋ’ ವಿಜಯ ಯಾತ್ರೆ; ಸೆ.10 ರಂದು ಈ 3 ಜಿಲ್ಲೆಗಳಿಗೆ ಬರಲಿದೆ ಚಿತ್ರತಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − nine =
Remember me
