ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆ ಈದ್ಗಾಮೈದಾನದಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸಾಥ್ ನೀಡಿದರು. ಈ ವೇಳೆ ಅವರು ಮುಸಲ್ಮಾನರು ಗೌರವದ ಸಂಕೇತವಾಗಿ ನೀಡಿದ ಟೋಪಿ ಹಾಗೂ ಶಾಲು ಧರಿಸಿ ವಿಶೇಷವಾಗಿ ಕಾಣಿಸಿಕೊಂಡರು.
ಇದನ್ನೂ ಓದಿ:ರಾಷ್ಟ್ರ ರಾಜಧಾನಿಯಲ್ಲೇ ಮರ್ಯಾದೆಗೇಡು ಹತ್ಯೆ; ಸ್ವಂತ ಮಗಳನ್ನೇ ನಿರ್ದಯವಾಗಿ ಕೊಂದ ತಂದೆ
ಬಳಿಕ ಮಾತನಾಡಿದ ಅವರು, ಎಲ್ಲಾ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಶುಭಾಶಯಗಳು. ಎಲ್ಲರೂ ಇಂದು ಭಕ್ತಿಯಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿ ಮನುಕುಲಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದೀರಿ. ಎಲ್ಲರೂ ಸಾಮೂಹಿಕ ಪ್ರಾರ್ಥನೆ ಮಾಡಿದ್ದು, ಸಮಾಜದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಬೇಕು ಎಂದರು. ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅಲ್ಪಸಂಖ್ಯಾತರು ಕೂಡ ಯಾವುದೇ ಕಾರಣಕ್ಕೂ ಭಯ ಆತಂಕ ಪಡಬೇಕಾದ ಅಗತ್ಯವಿಲ್ಲ. ನಮ್ಮ ಸರ್ಕಾರದಲ್ಲಿ ಅಲ್ಪಸಂಖ್ಯಾತರು, ಬಹುಸಂಖ್ಯಾತರನ್ನು ಒಂದೇ ರೀತಿಯಲ್ಲಿ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಎಲ್ಲಕ್ಕಿಂತ ಮುಖ್ಯವಾಗಿ ನಾಡಿನ ಅಭಿವೃದ್ಧಿಗೆ ಒಳ್ಳೆ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.
ಭಾರತ ಬಹುತ್ವದ ದೇಶ. ಎಲ್ಲಾ ಧರ್ಮ, ಜಾತಿ, ಭಾಷೆ, ಪ್ರಾಂತ್ರ್ಯದವರು ಒಟ್ಟಾಗಿ ಬಾಳಬೇಕು. ಮನುಷ್ಯತ್ವ ಬಹಳ ದೊಡ್ಡದು. ಎಲ್ಲರೂ ಪರಸ್ಪರ ಪ್ರೀತಿಸಬೇಕು. ಪ್ರತಿಯೊಬ್ಬರೂ ಸಹಿಷ್ಣುತೆಯನ್ನು ಪಾಲಿಸಬೇಕು. ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಹಾಗೆ ಬೆಳೆದಾಗ ಮಾತ್ರ ರಾಷ್ಟ್ರ ಸಮಾಜ ಹಾಗೂ ಎಲ್ಲ ಧರ್ಮಗಳೂ ಎಳಿಗೆಯಾಗುತ್ತದೆ ಎಂದರು.
ನಮ್ಮ ಸರ್ಕಾರ ಸರ್ವ ಧರ್ಮ ಸಮನ್ವಯದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವ ಸರ್ಕಾರ. ಸಂವಿಧಾನ ಹೇಳುವಂತೆ ನಡೆದುಕೊಳ್ಳುತ್ತೇವೆ. ಯಾವುದೇ ತಾರತಮ್ಯ ಮಾಡುವುದಿಲ್ಲ. ಕರ್ನಾಟಕದ ಏಳು ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ಈ ಕೆಲಸವನ್ನು ತಾರತಮ್ಯವಿಲ್ಲದೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ರಾಯ್​ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಗಾ: ವಯನಾಡ್​ದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
