ಬೆಂಗಳೂರು:ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಹೇಗೆ ಸೃಷ್ಟಿಸಿದೆ? ರಾಜ್ಯದ ಪಾಲಿನ ಹಣವನ್ನು ಕೊಡದೆ ಇರುವುದರಿಂದ ಸೃಷ್ಟಿಯಾಗಿರುವ ಪರಿಸ್ಥಿತಿಯನ್ನು ವಿವರಿಸಿದರು. ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆಯಿದೆ ಎಂದರು.
ಇದನ್ನೂ ಓದಿ:ಶಾಸಕ ಶಿವರಾಮ ಹೆಬ್ಬಾರ್ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ
“2015ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅದರ ಲಾಭವನ್ನು ದೇಶದ ಜನರಿಗೆ ನೀಡದೆ ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು 3,000 ಕೋಟಿ ರೂಪಾಯಿಗಳು ರಾಜ್ಯದ ಖಜಾನೆಗೆ ಸಂದಾಯವಾಗುತ್ತದೆ. ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆ ಹೊರೆತು ನಮ್ಮ ಜೇಬಿಗೆ ಹೋಗುವುದಿಲ್ಲ” ಎಂದು ಹೇಳಿದರು.
https://x.com/siddaramaiah/status/1802651416517136848
“ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ 40% ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದೂವರೆ ಲಕ್ಷ ಕೋಟಿ ರೂಪಾಯಿಗಳಷ್ಟು. ರಾಜ್ಯದ ಜನರ ಬೆವರಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರು ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದಾರೆ. ಇಂತಹ ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಜನಕಲ್ಯಾಣಕ್ಕಾಗಿ ಸ್ಪಲ್ಪ ಪ್ರಮಾಣದ ತೆರಿಗೆ ಹೆಚ್ಚಿಸಿದ್ದನ್ನು ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ?” ಎಂದು ಕಿಡಿಕಾರಿದರು.
ನಾಯಕನಾಗಿ ನೀನು ಮಾಡಿದ್ದೇನೂ ಇಲ್ಲ! ಬಾಬರ್ ಆಜಂ ನಿವೃತ್ತಿಗೆ ಒತ್ತಾಯಿಸಿದ ಪಾಕ್​ ಮಾಜಿ ಕ್ರಿಕೆಟಿಗ

ವಿಮಾನ ಸಿಬ್ಬಂದಿ ಕೊಟ್ಟ ಊಟದಲ್ಲಿತ್ತು ಹರಿತವಾದ ಬ್ಲೇಡ್​! ನನಗೆ ನಿಮ್ಮ ‘ಲಂಚ’ ಬೇಡ ಎಂದ ಪ್ರಯಾಣಿಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
