ಬೆಂಗಳೂರು:ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ್ ಪುತ್ರಿ, ಬಿವಿಬಿ ಕಾಲೇಜು ಎಂಸಿಎ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ವೈಯಕ್ತಿಕ ಕಾರಣಕ್ಕೆ ಆದ ಕೊಲೆ ಎಂದು ಹೇಳಿದ್ದಾರೆ.
ಪೊಲೀಸ್​ ಅಧಿಕಾರಿಗಳ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದ ಸಿಎಂ  ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದಲ್ಲದೆ ಚುನಾವಣಾ ಸಮಯದಲ್ಲಿ ಇಂತಹ ಅಹಿತಕರ ಘಟನೆಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ; ಸ್ಥಳದಲ್ಲಿದ್ದರು ಸಹಾಯಕ್ಕೆ ಬಾರದ ಪೊಲೀಸರು
ಪೊಲೀಸ್​ ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಮಾತನಾಡಿಸ ಸಿಎಂ ಸಿದ್ದರಾಮಯ್ಯ, ನೇಹಾಳ ಕೊಲೆ ಆಗಿರುವುದು ವೈಯಕ್ತಿಕ ಕಾರಣಕ್ಕೆ ಇದು ಲವ್​ ಜಿಹಾದ್​ ಅಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದು, ಅದನ್ನು ಕಾಪಾಡುವುದು ಸರ್ಕಾರದ ಕೆಲಸವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇತ್ತ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್​ ಸರ್ಕಾರದ ಸಚಿವರು ವಿಭಿನ್ನ ಹೇಳಿಕೆಗಳನ್ನು ನೀಡುತ್ತಿದ್ದು, ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಅಂತಿಮವಾಗಿ ಇದು ಯಾವ ಹಂತಕ್ಕೆ ತಲುಪಲಿದೆ ಎಂದು ಕಾದು ನೋಡಬೇಕಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 + eighteen =
Remember me
