ಬೆಂಗಳೂರು:ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ 19 ಮಂದಿ ಆರೋಪಿಗಳು ಪೊಲೀಸರ ವಶದಲ್ಲಿದ್ದು, ವಿಚಾರಣೆ ತೀವ್ರಗೊಂಡಂತೆ ಹೊಸ ಹೆಸರು ಹಾಗೂ ವಿಚಾರಗಳು ಹೊರಬರುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಹಾಗೂ ಅವರ ಆಪ್ತರನ್ನು ಕೇಸ್​ನಿಂದ ಹೊರತರಲು ಪ್ರಭಾವಿಗಳು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪದ ನಡುವೆಯೇ ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರನ್ನು ಬದಲಾಯಿಸುವಂತೆ ಒತ್ತಡ ಕೇಳಿ ಬರುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಸಿಎಂ, ರೇಣುಕಸ್ವಾಮಿ ಕೊಲೆ ಪ್ರಕರಣದ ಎಸ್.ಪಿ ಪಿ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ .ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಹೇಳಿದ್ದಾರೆ.
ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದುದು. ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ. ಪೊಲೀಸ್ ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯ ವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ. ಎಸ್​ಪಿಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಅವೆಲ್ಲವನ್ನೂ ನಾನು ಕೇಳುವುದೂ ಇಲ್ಲ. ಈ ನೆಲದ ಕಾನೂನು ಏನು ಹೇಳುತ್ತದೆಯೋ ಅದರಂತೆ ತನಿಖೆಯಾಗುತ್ತದೆ. ಇದರಲ್ಲಿ ಒತ್ತಡವೋ ಇನ್ನೊಂದೋ ಈ ಯಾವುದಕ್ಕೂ ನಾನು ಗಮನ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
