ಬೆಂಗಳೂರು:ಕಾಂಗ್ರೆಸ್ ಸರ್ಕಾರ(Congress Government)ಘೋಷಿಸಿರುವ ಗ್ಯಾರಂಟಿಗಳನ್ನು ಆರ್ಥಿಕವಾಗಿ ಸಾಮರ್ಥ್ಯವುಳ್ಳವರು ತ್ಯಜಿಸಿ, ಇಲ್ಲದವರಿಗೆ ತಲುಪುವಂತೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ(CM Siddaramaiah)ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಟೋಲ್​ ವಿಚಾರಕ್ಕೆ ಆರಂಭವಾದ ಜಗಳ; ಸಿಟ್ಟಿನಲ್ಲಿ ಹಾಕಿ ಸ್ಟಿಕ್​ನಿಂದ ಯುವಕನ ಜೀವ ತೆಗೆದ ದುಷ್ಕರ್ಮಿಗಳು
‘ಉಳ್ಳವರು’ ದೊಡ್ಡ ಮನಸ್ಸಿನಿಂದ ‘ಇಲ್ಲದವರ’ನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ(Gaurantee)ಯೋಜನೆಗಳನ್ನು ಬಿಟ್ಟುಕೊಟ್ಟರೆ ಅದು ರಾಜ್ಯ ಸರ್ಕಾರದ ಮೇಲಿರುವ ಆರ್ಥಿಕ ಹೊರೆಯನ್ನು ಕಡಿತಗೊಳಿಸುತ್ತದೆ. ಇದರಿಂದ ಆ ಹಣವನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಉಪಯೋಗಿಸಬಹುದು ಎಂದು ಸಿಎಂ ಪತ್ರದಲ್ಲಿ ಉಲ್ಲೇಖಿಸಿ ಹೇಳಿದ್ದಾರೆ.

ಸರ್ಕಾರಿ ಅಧಿಕಾರಿಗಳು, ಖಾಸಗಿ ವಲಯದಲ್ಲಿ ಕೆಲಸ ಮಾಡುತ್ತಿರುವವರು ಮತ್ತು ಮಾಧ್ಯಮಗಳ ಮುಖ್ಯಸ್ಥರು ಗೃಹ ಜ್ಯೋತಿ(Gruha Jyothi)ಯೋಜನೆಯನ್ನು ಬಿಟ್ಟುಕೊಡುವುದಾಗಿ ನನಗೆ ಪತ್ರ ಬರೆದಿದ್ದಾರೆ. ಈ ಯೋಜನೆಯ ಲಾಭದಿಂದ ಹೊರಗುಳಿಯಲು ಬಯಸುವವರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಶ್- ಅವಿವಾ: ಫೋಟೋಗಳು ಇಲ್ಲಿವೆ…
ಈ ಹಿಂದೆ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಬ್ಸಿಡಿಯನ್ನು ತ್ಯಜಿಸುವಂತೆ ಜನರಲ್ಲಿ ಅಭಿಯಾನ ಮಾಡಿತ್ತು. ಅನೇಕರು ಈ ಅಭಿಯಾನಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದರು. ಅದೇ ರೀತಿಯಲ್ಲಿ ನಮ್ಮ ಗ್ಯಾರಂಟಿಗಳನ್ನು ಕೂಡ ತ್ಯಜಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್(DK Shivakumar)ಹೇಳಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − thirteen =
Remember me
