ಬೆಂಗಳೂರು:ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ಜಾತಿ ಪದ್ದತಿ ನಾಶ ಆಗಬೇಕು. ಜಾತಿ ಪದ್ದತಿ ನಾಶವಾಗಲು ಅಂತರ್ಜಾತಿ ವಿವಾಹವೇ ಔಷಧಿ. ಸಂವಿಧಾನ ಕೂಡ ನಮ್ಮದು ಜಾತ್ಯತೀತ ಸಮಾಜ ಎಂದು ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಮಲಾ ಹಂಪಾನಾ ಸಾಹಿತ್ಯ ವೇದಿಕೆ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಬೆಳಕು ಬಿತ್ತಿದವರು’, ‘ಪ್ರಾಕೃತಾ ಕಥಾ ಸಾಹಿತ್ಯ’ ಮತ್ತು ‘the journey of life’ ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.
ಇದನ್ನೂ ಓದಿ:ರಾಜ್ಯಸರ್ಕಾರ ರೈತರ ನೆರವಿಗೆ ಬರಲಿ: ಬಿಜೆಪಿ ರೈತ ಮೋರ್ಚಾದಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಕೆ
ಜಾತಿ ಯಾವುದಿದ್ದರೂ ಅಂತಿಮವಾಗಿ ನಾವೆಲ್ಲ ಮನುಷ್ಯರು ಎಂಬುದನ್ನು ಯಾರೂ ಮನುಷ್ಯರಾಗಬೇಕು. ಮನುಷ್ಯ ಮನುಷ್ಯ ಪ್ರೀತಿಸುವುದೇ ಧರ್ಮ. ದ್ವೇಷಿಸುವುದು ಅದರ್ಮ. ಆದರೆ ಇಂದು ದ್ವೇಷವನ್ನು ಆರಾಧಿಸುವ ಸಮಾಜವನ್ನು ನಿರ್ಮಿಸುವ ಅಪಾಯಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಇದಕ್ಕೆ ಪ್ರಜ್ಞಾವಂತರಾದ ನಾವೆಲ್ಲರೂ ತಡೆ ಹಾಕಬೇಕು. ಶಿಕ್ಷಣದ ಜತೆಗೆ ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸಿಕೊಂಡಾಗ ಸಮಾಜದಲ್ಲಿ ಬದಲಾವಣೆ ನಿರೀಕ್ಷೆ ಮಾಡಬಹುದು ಎಂದು ಸಿಎಂ ಅಭಿಪ್ರಾಯಪಟ್ಟರು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸಾಮಾಜಿಕ‌, ಆರ್ಥಿಕ‌ ತಳಹದಿಯ ಮೇಲೆ ರೂಪುಗೊಳ್ಳದಿದ್ದರೆ ಸ್ವಾತಂತ್ರ್ಯದ ಉದ್ದೇಶ ಈಡೇರುವುದಿಲ್ಲ ಎಂದಿದ್ದರು. ಹೀಗಾಗಿ ಸ್ವಾತಂತ್ರ್ಯದ ಉದ್ದೇಶ ಈಡೇರಬೇಕಾದರೆ ಸಮಾಜದಲ್ಲಿ ಅವಕಾಶ ಮತ್ತು ಸಂಪತ್ತು ಸಮಾನ ಹಂಚಿಕೆ ಆಗಿ ಸಮ ಸಮಾಜ ನಿರ್ಮಾಣ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಹಂಪಾ ನಾಗರಜಯ್ಯ, ಕಮಲಾ ಹಂಪನಾ, ಸಾಹಿತಿ ಬರಗೂರು ರಾಮಚಂದ್ರಪ್ಪ, ಲೇಖಕ ಜಿ.ಎನ್.ಮೋಹನ್ ಮತ್ತಿತರರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eleven + eighteen =
Remember me
