ನವದೆಹಲಿ:ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಮಲತಾಯಿ ಧೋರಣೆಯನ್ನು ಆರೋಪಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದೆಹಲಿಯ ಜಂತರ್ ಮಂತರ್​​ನಲ್ಲಿ ಪ್ರತಿಭಟನೆ ನಡೆಸುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯಸಂಪುಟದ ಎಲ್ಲ ಸಚಿವರು, ಕಾಂಗ್ರೆಸ್ ಪಕ್ಷದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು, ಸಂಸದರು ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಈ ಪ್ರತಿಭಟನೆ ಯಾವುದೇ ಪಕ್ಷದ ವಿರುದ್ಧ ಅಲ್ಲ. ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು ಎಂಬ ಕಾರಣಕ್ಕೆ ಈ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ಚಳವಳಿ ರಾಜಕೀಯ ಚಳವಳಿ ಅಲ್ಲ. ಇದು ರಾಜಕೀಯೇತರ ಚಳವಳಿ. ಕನ್ನಡಿಗರ ಹಿತ ಕಾಯಲು ಮಾಡುತ್ತಿರುವ ಪ್ರತಿಭಟನೆ ಎಂದರು.
ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿ,  ಕರ್ನಾಟಕಕ್ಕೆ ಇಷ್ಟು ಮೋಸ ಆಗುತ್ತದೆ ಎಂದು ನಮಗೆ ಗೊತ್ತಿರಲಿಲ್ಲ. ಕರ್ನಾಟಕದಿಂದ ಕೇಳಿದ್ದೆವು. ಅದು ಕೇಂದ್ರ ಸರ್ಕಾರಕ್ಕೆ ಕೇಳಿಸಲಿಲ್ಲ. ಆ ಕಾರಣಕ್ಕೆ ಇಲ್ಲಿ ಕೂಗಿ ಹೇಳಲು ಬಂದಿದ್ದೇವೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲವಾಗಿದೆ. ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯ ಕೇಂದ್ರ ಸರ್ಕಾರದ ಕಿವಿಗೆ ಬೀಳಲಿ ಎಂದು ದೆಹಲಿಗೆ ಬಂದು ಪ್ರತಿಭಟನೆ ಮಾಡುತ್ತಿದ್ದೇವೆ. ಡಿ.ಕೆ. ಶಿವಕುಮಾರ್​, ಬಿಜೆಪಿಗರು ಅನ್ಯಾಯದ ಬಗ್ಗೆ ಹೇಳಿದ್ದರೂ ಕಿವಿಗೆ ಹಾಕಿಕೊಂಡಿಲ್ಲ. ಹೀಗಾಗಿ ಹೋರಾಟ ಅನಿವಾರ್ಯ ಎಂದಿದ್ದಾರೆ.
ಐಶ್ವರ್ಯಾ ರೈಗೆ ಟಕ್ಕರ್​​ ಕೊಟ್ಟಿದ್ದ ಖ್ಯಾತ ನಟಿ ಈಗ ಸನ್ಯಾಸಿ; ನಟನೆಗೆ ಗುಡ್ ಬೈ ಹೇಳಿ ಹೆಸರನ್ನು ಬದಲಾಯಿಸಿಕೊಂಡಳು

ಹೊಸದಾಗಿ ಮದುವೆಯಾಗುವ ಜೋಡಿಗಳಿಗೆ ಸಾನಿಯಾ ಮಿರ್ಜಾ ಕೊಟ್ಟ ಟಿಪ್ಸ್​ ಏನು ಗೊತ್ತಾ?

ಗುಬ್ಬು ನಾರುತ್ತಿರುವ ಕಾಲುವೆ ಬಳಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ದಂಪತಿ

ಸೀತಾರಾಮ ನಟಿ ಮೃಣಾಲ್​ಗೆ ಪ್ರಶಸ್ತಿ ಸಮಾರಂಭದಲ್ಲಿ ಕಹಿ ಅನುಭವ; ಇದು ಸ್ಟಾರ್ ಮಕ್ಕಳ ತಪ್ಪು ಅಲ್ಲ ಎಂದ ನಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 17 =
Remember me
