ಬೆಂಗಳೂರು:ರಾಜ್ಯದಲ್ಲಿ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವ ಸನ್ನಿವೇಶ ಸೃಷ್ಟಿಯಾಗಿತ್ತು. ಇದನ್ನು ನಮ್ಮ ಸರ್ಕಾರ ಬದಲಾಯಿಸಿ, ಈ ವರ್ಗಗಳ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಕೆಲಸ ಮಾಡಲಿದೆ. ಈಗಾಗಲೇ ಕೆಲಸ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
‘ಎದ್ದೇಳು ಕರ್ನಾಟಕ ಸಂಘಟನೆ’ಯ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿ ಮಾತನಾಡುತ್ತಾ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ ಎಂದು ತಿಳಿಸಿದರು.
ನಮ್ಮ ಸರ್ಕಾರವು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿದೆ. ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗುವುದು. ಇದಕ್ಕೆ ವಾರ್ಷಿಕ 59,000 ಕೋಟಿ ರೂ. ಹಣಕಾಸಿನ ಅಗತ್ಯವಿದ್ದು, ಪ್ರಸಕ್ತ ವರ್ಷದ ಬಾಕಿ ಉಳಿದ ತಿಂಗಳುಗಳಿಗೆ 41,000 ಕೋಟಿ ರೂ. ಗಳ ಅಗತ್ಯವಿದೆ ಎಂದು ವಿವರಿಸಿದರು. ಇದೇ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಜತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ನಿಯೋಗದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಕೆ.ಎಂ.ರಾಮಚಂದ್ರಪ್ಪ, ನೂರ್ ಶ್ರೀಧರ್, ವಿಜಯಮ್ಮ, ಮಲ್ಲಿಗೆ, ಜೆ.ಎಸ್.ಪಾಟೀಲ್, ಅಬ್ದುಲ್ ಘನಿ ಸೇರಿದಂತೆ 30 ಕ್ಕೂ ಅಧಿಕ ಮಂದಿ ನಾನಾ ಸಂಘಟನೆಗಳ ಪ್ರತಿನಿಧಿಗಳು ನಿಯೋಗದಲ್ಲಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
