ಬೆಂಗಳೂರು:ರಾಜ್ಯದ ಪ್ರತಿ ಹೋಬಳಿಗೊಂದು ವಸತಿ ಶಾಲೆ ನಿರ್ಮಿಸಲು ಸರ್ಕಾರ ಉದ್ದೇಶಿಸಿದ್ದು,ಹೊಸದಾಗಿ20ವಸತಿ ಶಾಲೆ ತೆರೆಯಲು ಬಜೆಟ್‌ನಲ್ಲಿ ಅನುದಾನ ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(ಕ್ರೈಸ್)ಬುಧವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಕೈಗೊಂಡಿದೆ. 1994ರಲ್ಲಿ ತಾವು ಹಣಕಾಸು ಸಚಿವರಾಗಿದ್ದಾಗ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಆರಂಭ ಮಾಡಿದ್ದು,ಡಿಎಸ್‌ಎಸ್ ಹೋರಾಟ ಮತ್ತು ಆಗ್ರಹವೇ ಇದಕ್ಕೆ ಪ್ರೇರಣೆಯಾಗಿತ್ತು.ವಸತಿ ಶಾಲೆಗಳಿಂದ ದಲಿತ,ಹಿಂದುಳಿದ ಮತ್ತು ಬಡ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಮುಂದೆ ಬರಲು ಸಾಧ್ಯ ಎಂಬುದು ನನ್ನ ನಂಬಿಕೆ.ಅದರ ಭಾಗವಾಗಿ ರಾಜ್ಯದಲ್ಲಿ ಒಟ್ಟು946ವಸತಿ ಶಾಲೆಗಳಿವೆ.ಕೆಲವೊಂದು ಹೋಬಳಿಗಳಲ್ಲಿ ವಸತಿ ಶಾಲೆಗಳಿಲ್ಲ ಎಂಬ ಮಾಹಿತಿಯನ್ನು ಪಡೆದು ಕಳೆದ ಬಜೆಟ್‌ನಲ್ಲಿ ಹೊಸದಾಗಿ20ವಸತಿ ಶಾಲೆಗಳನ್ನು ೋಷಿಸಲಾಗಿದೆ ಎಂದು ಸಿಎಂ ವಿವರಿಸಿದರು.
ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ,ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ,ಶಾಸಕ ರಿಜ್ವಾನ್ ಅರ್ಷದ್,ಸುಧಾಮದಾಸ್,ರೋಟರಿ ಸಂಸ್ಥೆಯ ರಾಮಣ್ಣಗೌಡ,ಹಿರಿಯ ಐಎಎಸ್ ಅಧಿಕಾರಿಗಳಾದ ಮಣಿವಣ್ಣನ್,ರಾಕೇಶ್ ಮತ್ತಿತರರು ಉಪಸ್ಥಿತರಿದ್ದರು.
ಖಾಸಗಿ ಶಾಲೆಗಳ ಭರಾಟೆ ನಡುವೆಯೂ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಉನ್ನತ ಸಾಧನೆ ಗೈಯಲು ಸಾಧ್ಯ ಎಂಬುದು ಈ ಬಾರಿ ಎಸ್‌ಎಸ್‌ಎಲ್‌ಸಿ ಲಿತಾಂಶದಿಂದ ಸಾಭೀತಾಗಿದೆ.ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮೇಳ್ಳಿಗೇರಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತ ಎಂಬ ವಿದ್ಯಾರ್ಥಿನಿ625ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದಿರುವುದು ನನಗೆ ಅತ್ಯಂತ ಸಂತಸವನ್ನುಂಟು ಮಾಡಿದೆ. 623ಅಂಕ ಪಡೆದ ತೃತೀಯ ರಾಂಕ್ ಕೂಡಾ ಸರ್ಕಾರಿ ಶಾಲೆಯ ವಿದ್ಯಾರ್ಥಿಗೆ ಬಂದಿದ್ದು,ಈ ಸಾಧನೆಗೆ ಕಾರಣರಾದ ವಿದ್ಯಾರ್ಥಿಗಳನ್ನು ಹಾಗೂ ತರಬೇತಿ ನೀಡಿದ ಶಿಕ್ಷಕರನ್ನು ಸಿಎಂ ಅಭಿನಂದಿಸಿದರು.ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುವುದಿಲ್ಲ ಎಂಬುದು ಸುಳ್ಳು.ಗುಣಮಟ್ಟದ ಶಿಕ್ಷಣ ಎಂದರೆ ಕೇವಲ ಅಂಕ ಗಳಿಸುವುದಲ್ಲ;ವಿದ್ಯಾರ್ಥಿಗಳನ್ನು ವೈಚಾರಿಕವಾಗಿ,ವೈಜ್ಞಾನಿಕವಾಗಿ ಜ್ಞಾನವಂತರನ್ನಾಗಿಸಬೇಕು.ಈ ನಿಟ್ಟಿನಲ್ಲಿ ಶಿಕ್ಷಕರು ಶ್ರಮವಹಿಸುವಂತೆ ಸಿಎಂ ಕಿವಿಮಾತು ಹೇಳಿದರು.
ಸಂವಿಧಾನ ಜಾರಿಯಾದ ನಂತರ ಶಿಕ್ಷಣ ಕಡ್ಡಾಯವಾಯಿತು.ಅಲ್ಲಿಯವರೆಗಿದ್ದ ಜಾತಿವ್ಯವಸ್ಥೆಯಲ್ಲಿ ಶೂದ್ರರಿಗೆ ಶಿಕ್ಷಣ ಪಡೆಯುವ ಹಕ್ಕು ಇರಲಿಲ್ಲ.ಚತುರ್ವರ್ಣ ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ಅಸಮಾನತೆ ಉಂಟಾಗುತ್ತದೆ.ಸಮ ಸಮಾಜ ನಿರ್ಮಾಣಕ್ಕೆ ಜಾತಿವ್ಯವಸ್ಥೆಯೇ ಮಾರಕ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ನಮಗೆ ದೊರೆತ ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ ಎಲ್ಲರಿಗೂ ಶಿಕ್ಷಣ ದೊರೆಯಬೇಕು ಎಂಬುದು ಅಂಬೇಡ್ಕರ್ ಅವರ ಆಶಯ. 900ವರ್ಷಗಳ ಹಿಂದೆ ಬಸವಣ್ಣನವರು ಹೇಳಿರುವ ‘ಇವ ನಮ್ಮವ’ ಎಂಬ ಮಾತು ಇಂದಿಗೂ ಪೂರ್ಣವಾಗಿ ಅನುಷ್ಟಾನವಾಗದಿದ್ದುದು ದುರಂತ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭೆ ಯಾರ ಹಕ್ಕೂ ಅಲ್ಲ.ಅದು ಸಾಧಕನ ಹಕ್ಕು.ಶ್ರಮಪಟ್ಟು ಸಾಧನೆ ಮಾಡಿ ಯಾವುದೇ ವ್ಯಕ್ತಿ ಉನ್ನತ ಸ್ಥಾನವನ್ನು ಪಡೆಯಬಹುದು.ಸಂವಿಧಾನವು ದೇಶದ ಪ್ರತಿಯೊಬ್ಬರಿಗೂ ಅಂತಹದ್ದೊಂದು ಅವಕಾಶ ಒದಗಿಸಿಕೊಟ್ಟಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಅಭಿಪ್ರಾಯಿಸಿದರು. ‘ದಲಿತರು,ಹಿಂದುಳಿದವರು ಕೇವಲ ಮೀಸಲಾತಿ ಪಡೆದುಕೊಳ್ಳುವುದಕ್ಕೆ ಸೀಮಿತವಾಗದೆ;ಅಧಿಕಾರದ ನಿರ್ಣಾಯಕ ಸ್ಥಾನದಲ್ಲಿ ಬಂದು ಕುಳಿತುಕೊಳ್ಳಬೇಕು’ ಎಂಬ ಅಂಬೇಡ್ಕರ್ ಮಾತನ್ನು ವಿದ್ಯಾರ್ಥಿಗಳು ನೆನಪಿನಲ್ಲಿಡುವಂತೆ ಅವರು ಸಲಹೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
