ಹಾಸನ:ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿನಲ್ಲಿ ಪದೇ ಪದೆ ಭೂ‌ಕುಸಿತ ಹಿನ್ನೆಲೆ ಗುಡ್ಡ ಕುಸಿತ ಪ್ರದೇಶಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶಿರಾಡಿ ಘಾಟಿಯ ಹಲವೆಡೆ ಗುಡ್ಡ ಕುಸಿತ‌ ಪ್ರದೇಶಗಳನ್ನು ಪರಿಶೀಲಿಸಿರುವ ಸಿಎಂ, ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ:ದೇವೇಗೌಡರಿಗೆ ಇಷ್ಟು ಆಸ್ತಿ ಎಲ್ಲಿಂದ ಬಂತು? ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು
ಶಿರಾಡ್ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಮುಖ್ಯಮಂತ್ರಿಗಳು ಶಾಕ್ ಆಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗಳಿಗೆ ಸಿಎಂ ಪ್ರಶ್ನೆಗಳ ಸುರಿಮಳೆಗೈದರು.
ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡು ಗುಡ್ಡ ಕುಸಿತಕ್ಕೆ ಇದೂ ಕೂಡ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂಗೆ ವಿವರಿಸುತ್ತಾ, “ಒಟ್ಟು 45 km ನಲ್ಲಿ 35 km ಹೈವೇ ಕಾಮಗಾರಿ ಮುಗಿದಿದೆ. 10 km ಬಾಕಿ ಇದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ಇಲ್ಲ” ಎಂದು ವಿವರಿಸಿದರು.
ಮೊಣಕಾಲುದ್ದುದ ಕೆಸರಲ್ಲೇ ಗುಡ್ಡ ಕುಸಿತದ ಜಾಗದುದ್ದಕ್ಕೂ ನಡೆದು ಪರಿಶೀಲಿಸಿದ ಮುಖ್ಯಮಂತ್ರಿಗಳು ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ SDRF ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದರು. ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ‌ ಅಧಿಕಾರಿ ವಿಲಾಸ್ ಅವರ ಮುಂದೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟರು.
ಮುಖ್ಯಮಂತ್ರಿಗಳ ಪ್ರಶ್ನೆಗೆ ಅಧಿಕಾರಿಗಳಿಂದ ಸೂಕ್ತ ಉತ್ತರ ಬರದಿದ್ದಾಗ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಈ ಕೂಡಲೇ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಿಎಂ ಸೂಚಿಸಿದರು.
ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಮುಖ್ಯಮಂತ್ರಿಗಳು ಮಾರ್ಗದುದ್ದಕ್ಕೂ ನಾನಾ ರಸ್ತೆ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಬಿಳಿಕೆರೆ ಕ್ರಾಸ್ ನಿಂದ ಯಡಗೊಂಡನಹಳ್ಳಿ ವರೆಗಿನ 41ಕಿಮೀ ಉದ್ದದ ನಾಲ್ಕು ಪಥ ರಾಷ್ಟ್ರೀಯ ಹೆದ್ದಾರಿ ಉದ್ದೇಶಿತ ಯೋಜನೆ ಬಗ್ಗೆ ಮಾಹಿತಿಯನ್ನು ಪಡೆದರು.
ಭ್ರಷ್ಟ ಕಾಂಗ್ರೆಸ್‌‍ ಸರ್ಕಾರದ ರೇಟ್‌ ಕಾರ್ಡ್‌, ಎಕ್ಸ್ಟ್ರಾ ಟಿಪ್ಸ್ ಹಾವಳಿಯಿಂದ ಪಿಎಸ್‌‍ಐ ಪರಶುರಾಮ್ ಸಾವು: ಸಿ.ಟಿ.ರವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − two =
Remember me
