ಬೆಂಗಳೂರು:ಸಂವಿಧಾನ ತಿದ್ದುಪಡಿ ಕುರಿತು ಉತ್ತರ ಕನ್ನಡ ಸಂಸದ ಅನಂತ ಕುಮಾರ್​ ಹೆಗಡೆ ಆಡಿರುವ ಮಾತುಗಳು ಸದ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಇದೀಗ ಸಿಎಂ ಸಿದ್ದರಾಮಯ್ಯ ಬಿಜೆಪಿ ಹಾಗೂ ಸಂಸದ ಅನಂತಕುಮಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:5 ನಿಮಿಷ ತಡವಾಗಿದ್ದಕ್ಕೆ ತನ್ನ ಹೆಂಡತಿಗೇ ನಾಟಕಕ್ಕೆ ಸೇರಿಸಿರಲಿಲ್ಲವಂತೆ ಲಂಕೇಶ್
“ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಬಿಜೆಪಿ ಪಕ್ಷದ ಗುಪ್ತ ಅಜೆಂಡಾದ ಭಾಗವೇ ಆಗಿದೆ” ಎಂದರು.
“ನಮ್ಮ ಸಂವಿಧಾನ ಸರ್ವಧರ್ಮಗಳನ್ನೂ ಸಮಭಾವದಿಂದ ನೋಡುತ್ತದೆ. ಪ್ರತಿಯೊಬ್ಬ ಪ್ರಜೆಗೂ ತನ್ನ ನಂಬಿಕೆಯ ಧರ್ಮವನ್ನು ಪಾಲಿಸಿಕೊಂಡು ಬರುವ ಸ್ವಾತಂತ್ರ್ಯವನ್ನು ನೀಡಿದೆ. ಹೀಗಿರುವಾಗ ಸಂವಿಧಾನವನ್ನೇ ಬದಲಾಯಿಸಿ ಅನಂತ್ ಕುಮಾರ್ ಹೆಗಡೆ ಯಾವ ಹಿಂದೂಧರ್ಮವನ್ನು ರಕ್ಷಿಸಲು ಹೊರಟಿದ್ದಾರೆ? ಹೆಗಡೆಯವರ ಹೇಳಿಕೆಯನ್ನು ಗಮನಿಸಿದರೆ, ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿ ಕೊಟ್ಟ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಹೆಗಡೆ ಮತ್ತು ಅವರ ಪಕ್ಷಕ್ಕೆ ಇದೆ ಎನ್ನುವುದು ಸ್ಪಷ್ಟ” ಎಂದರು.
ಇದನ್ನೂ ಓದಿ:400 ಸ್ಥಾನ ಗೆದ್ರೆ ಸಂವಿಧಾನ ತಿದ್ದುಪಡಿ! ಅನಂತ ಕುಮಾರ್​ ಹೆಗಡೆ ಹೇಳಿಕೆ, ರಾಹುಲ್​ ವಾಗ್ದಾಳಿ, ಬಿಜೆಪಿ ಸ್ಪಷ್ಟನೆ ಹೀಗಿದೆ…
“ಸಂವಿಧಾನದ ವಿರುದ್ಧ ಅನಂತಕುಮಾರ ಮಾತನಾಡಿರುವುದು ಇದೇ ಮೊದಲ ಬಾರಿ ಅಲ್ಲ. ಸಂವಿಧಾನವನ್ನು ಬದಲಾಯಿಸಬೇಕು, ಬದಲಾಯಿಸುವುದೇ ನಮ್ಮ ಉದ್ದೇಶ” ಎಂದೆಲ್ಲಾ ಆಗಾಗ ಅವರು ವಿಷಕಾರುತ್ತಲೇ ಇದ್ದಾರೆ. ಇಲ್ಲಿಯವರೆಗೆ ಬಿಜೆಪಿ ವರಿಷ್ಠರು ಅವರಿಗೆ ಕನಿಷ್ಠ ಎಚ್ಚರಿಕೆಯನ್ನೂ ನೀಡದೆ ಪರೋಕ್ಷವಾಗಿ ಅವರನ್ನು ಬೆಂಬಲಿಸುತ್ತಾ ಬಂದಿರುವುದನ್ನು ನೋಡಿದರೆ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಬೆಂಬಲ ಅವರಿಗಿದೆ ಎನ್ನುವುದು ಸ್ಪಷ್ಟ” ಎಂದಿದ್ದಾರೆ.
“ಹೆಗಡೆ ಅಭಿಪ್ರಾಯವನ್ನು ಮೋದಿಯವರು ಒಪ್ಪದಿದ್ದರೆ ಅವರನ್ನು ಮೊದಲು ಪಕ್ಷದಿಂದ ಕಿತ್ತುಹಾಕಬೇಕು. ಅವರ ವಿರುದ್ಧ ಕ್ರಮಕೈಗೊಳ್ಳದೆ ಇದ್ದರೆ ಹೆಗಡೆ ಅಭಿಪ್ರಾಯಕ್ಕೆ ಪ್ರಧಾನಿಯವರ ಸಹಮತಯಿದೆ ಎಂದರ್ಥ. ಸಾರ್ವಜನಿಕ ಭಾಷಣಗಳಲ್ಲಿ ಸಂವಿಧಾನದ ಮೇಲೆ ಬದ್ಧತೆಯನ್ನು ಸಾರುವ ಮೋದಿ ಅವರ ಮಾತುಗಳು ಬರೀ ಓಳು ಎಂದು ತಿಳಿದುಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.
ಇದನ್ನೂ ಓದಿ:ವಚನ ಸಾಹಿತ್ಯದಲ್ಲೂ ಪಿತೃಪ್ರಧಾನ ರಾಜಕೀಯ: ಬರಹಗಾರ್ತಿ ಡಾ.ವಿನಯಾ ಒಕ್ಕುಂದ ಬೇಸರ
“ಪಕ್ಷದ ವರಿಷ್ಠರ ಬೆಂಬಲವಿಲ್ಲದೆ ಅನಂತಕುಮಾರ ಹೆಗಡೆಯಂತಹ ಸಂಸದನೊಬ್ಬ ಈ ರೀತಿ ನಿರ್ಭೀತಿಯಿಂದ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಲು ಸಾಧ್ಯವಿಲ್ಲ. ಸಂವಿಧಾನಕ್ಕೆ ಬದ್ಧನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿರುವ ಅನಂತ್ ಕುಮಾರ್ ಹೆಗಡೆ, ಅದೇ ಸಂವಿಧಾನದ ವಿರುದ್ಧ ಹೇಳಿಕೆ ನೀಡಿರುವುದು ಖಂಡಿತ ಶಿಕ್ಷಾರ್ಹ ಅಪರಾಧ. ಇದನ್ನು ಲೋಕಸಭಾಧ್ಯಕ್ಷರು ಗಮನಕ್ಕೆ ತೆಗೆದುಕೊಂಡು ಹೆಗಡೆ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅವರನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು” ಎಂದು ವಾಗ್ದಾಳಿ ನಡೆಸಿದರು.
ಹರಾಜಿನಲ್ಲಿ ಒಂದೇ ಒಂದು ನಿಂಬೆ ಹಣ್ಣಿಗೆ 35,000 ರೂ.! ಖರೀದಿ ಮಾಡಿದ ವ್ಯಕ್ತಿಯ ಖುಷಿ ಹೇಳತೀರದು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
