ಬೆಂಗಳೂರು:ಭಾರತೀಯ ಆಹಾರ ನಿಗಮ(FCI)ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರವನ್ನು ರಾಜ್ಯ ಸರ್ಕಾರ ತೋರಿಸಲಿ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ(CT Ravi)ಸವಾಲು ಹಾಕಿದ್ದರು.
ಇದನ್ನೂ ಓದಿ:118 ಕೋಟಿ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿ; 8 ಬಿಬಿಎಂಪಿ ಇಂಜಿನಿಯರ್‌ಗಳ ಅಮಾನತು!
ಸಿ.ಟಿ. ರವಿ ಸವಾಲಿಗೆ ಉತ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), “ಭಾರತೀಯ ಆಹಾರ ನಿಗಮ(ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ‌ ನಾಯಕ ಸಿ.ಟಿ. ರವಿ ಸವಾಲು ಹಾಕಿದ್ದರು. ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ. ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು” ಎಂದು ಹೇಳಿದ್ದಾರೆ.
ಇದನ್ನೂ ಓದಿ:ಅಡುಗೆ ತಯಾರಿಯಲ್ಲಿದ್ದ ಮಹಿಳೆಯರ ಮೇಲೇ ಬಿದ್ದ ಶಾಮಿಯಾನ; ಒಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ
“ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ” ಎಂದು ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ ತೋರಿಸುವ ಮೂಲಕ ಸಿ.ಟಿ. ರವಿ ಅವರಿಗೆ ಸಿಎಂ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 1 =
Remember me
