ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ನಡುವೆ ನಡೆದ ಫೋನ್​ ಸಂಭಾಷಣೆ ಕುರಿತು ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾಧ್ಯಕ್ಷರಾದ ಎಚ್​.ಡಿ. ಕುಮಾರಸ್ವಾಮಿ ನೀಡಿದ ಹೇಳಿಕೆಗಳನ್ನು ತಳ್ಳಿಹಾಕಿದ ಸಿಎಂ, ಟ್ವೀಟ್​ ಮುಖೇನ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ವಿಶ್ವದಲ್ಲಿ ವಿಚ್ಛೇದನ ದರ: ಯಾವ ದೇಶದಲ್ಲಿ ವಿಚ್ಛೇದನದ ಸಂಖ್ಯೆ ಹೆಚ್ಚಿದೆ, ಭಾರತದ ಸ್ಥಾನವೇನು?
“ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್​ಡಿಕೆ ಅವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನ ಮಗನ ನಡುವಿನ ಪೋನ್ ಸಂಭಾಷಣೆಗೆ ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ” ಎಂದರು.
“ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಸಿಎಸ್ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಫಲಾನುಭವಿ ಶಾಲೆಗಳ ಪಟ್ಟಿ ಬಗ್ಗೆ ನನ್ನ ಜತೆ ಮಾತನಾಡಿದ್ದರು. ಕ್ಷೇತ್ರದ ಜನರ ಎದುರಿನಲ್ಲಿಯೇ ನಡೆದಿರುವ ಈ ಸಂಭಾಷಣೆಯನ್ನು ವರ್ಗಾವಣೆಗಾಗಿ ವಸೂಲಿ ಎಂಬ ಅರ್ಥ ಬರುವ ಹಾಗೆ ತಿರುಚಿರುವ ಕುಮಾರಸ್ವಾಮಿ ತಮ್ಮ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ” ಎಂದರು.
ಇದನ್ನೂ ಓದಿ:ಅಭಿಮಾನಿಗೆ ಹೊಡೆದಿದ್ದಕ್ಕೆ ಕ್ಷಮೆಯಾಚಿಸಿದ ಬಾಲಿವುಡ್​ ನಟ ನಾನಾ ಪಾಟೇಕರ್​
“ಕುಮಾರಸ್ವಾಮಿಯವರು ರಾಜಕೀಯಕ್ಕೆ ಪ್ರವೇಶ ಮಾಡಿದ ದಿನದಿಂದ ನಿರಂತರವಾಗಿ ಕಪೋಲ ಕಲ್ಪಿತ ಆರೋಪಗಳ ಮೂಲಕ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಬಾಯಿಗೆ ಬಂದಂತೆ ಮಾತನಾಡುತ್ತಾ ಬರುತ್ತಿದ್ದುದನ್ನು ರಾಜ್ಯದ ಜನ ಕಂಡಿದ್ದಾರೆ. ಈಗ ತಂದೆಯಾದ ನನಗೆ ನೋವು ಕೊಡಬೇಕೆಂಬ ಏಕೈಕ ದುರುದ್ದೇಶದಿಂದ ಡಾ.ಯತೀಂದ್ರ ಅವರನ್ನು ಗುರಿಯಾಗಿಸಿಕೊಂಡು ಪ್ರತಿನಿತ್ಯ ಸುಳ್ಳು ಆರೋಪಗಳನ್ನು ಹರಿಬಿಡುತ್ತಿರುವುದು ಕುಮಾರಸ್ವಾಮಿ ಅವರ ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ” ಎಂದು ಹೇಳಿದರು.
“ಶಾಸಕ ಸ್ಥಾನವನ್ನೇ ತ್ಯಾಗ ಮಾಡಿದರೂ ಜನಸೇವೆಯಿಂದ ಹಿಂದೆ ಸರಿಯದ ಡಾ.ಯತೀಂದ್ರ ಅವರು ವರುಣ ಕ್ಷೇತ್ರದ ಅಭಿವೃದ್ದಿಯಲ್ಲಿ ಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರನ್ನು ನೈತಿಕವಾಗಿ ಕುಗ್ಗಿಸುವ ದುರುದ್ದೇಶದಿಂದ ಎಚ್​ಡಿಕೆ ಪ್ರತಿನಿತ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ತಮ್ಮ ಪತ್ನಿ ಮತ್ತು ಮಗ ಕೂಡಾ ರಾಜಕೀಯ ಕ್ಷೇತ್ರದಲ್ಲಿದ್ದಾರೆ ಎನ್ನುವುದನ್ನು ಕುಮಾರಸ್ವಾಮಿ ಮರೆತಂತಿದೆ” ಎಂದರು.
ಇದನ್ನೂ ಓದಿ:ಮಾಲ್ಡೀವ್ಸ್​​​, ಬಾಲಿ, ಪ್ಯಾರಿಸ್​​​​ ಯಾವುದೂ ಅಲ್ಲ, ಕಪಲ್ಸ್​​​​ ಹೆಚ್ಚಾಗಿ ಹನಿಮೂನ್​​​ಗೆ ಹೋಗುವ ಮತ್ತೊಂದು ಡೆಸ್ಟಿನೇಷನ್ ಇದೆ ​​​; ಯಾವುದು ಗೊತ್ತಾ.?!
“ನಾನು ಕುಮಾರಸ್ವಾಮಿ ಮಟ್ಟಕ್ಕೆ ಇಳಿದು ಅವರ ರೀತಿ ಅವರ ಪತ್ನಿ ಮತ್ತು ಮಗನ ಬಗ್ಗೆ ಮಾತನಾಡಲಾರೆ. ಕನಿಷ್ಠ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಾದರೂ ಮಗನಿಗೆ ಬುದ್ದಿ ಹೇಳಿ ರಾಜ್ಯದ ಜನರಿಂದ ಮಗ ಛೀಮಾರಿಗೆ ಈಡಾಗುತ್ತಿರುವುದನ್ನು ತಪ್ಪಿಸಬೇಕೆಂದು ಕೋರುತ್ತೇನೆ” ಎಂದು ಹೇಳುವ ಮುಖೇನ ತಿರುಗೇಟು ನೀಡಿದ್ದಾರೆ.
ಕುಮಾರಸ್ವಾಮಿಯವರು ರಾಜಕೀಯಕ್ಕೆ ಪ್ರವೇಶ ಮಾಡಿದ ದಿನದಿಂದ ನಿರಂತರವಾಗಿ ಕಪೋಲ ಕಲ್ಪಿತ ಆರೋಪಗಳ ಮೂಲಕ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಬಾಯಿಗೆ ಬಂದಂತೆ ಮಾತನಾಡುತ್ತಾ ಬರುತ್ತಿದ್ದುದನ್ನು ರಾಜ್ಯದ ಜನ ಕಂಡಿದ್ದಾರೆ. ಈಗ ತಂದೆಯಾದ ನನಗೆ ನೋವು ಕೊಡಬೇಕೆಂಬ ಏಕೈಕ ದುರುದ್ದೇಶದಿಂದ ಡಾ.ಯತೀಂದ್ರ ಅವರನ್ನು ಗುರಿಯಾಗಿಸಿಕೊಂಡು ಪ್ರತಿನಿತ್ಯ…— Siddaramaiah (@siddaramaiah)November 16, 2023
ಕುಮಾರಸ್ವಾಮಿಯವರು ರಾಜಕೀಯಕ್ಕೆ ಪ್ರವೇಶ ಮಾಡಿದ ದಿನದಿಂದ ನಿರಂತರವಾಗಿ ಕಪೋಲ ಕಲ್ಪಿತ ಆರೋಪಗಳ ಮೂಲಕ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಬಾಯಿಗೆ ಬಂದಂತೆ ಮಾತನಾಡುತ್ತಾ ಬರುತ್ತಿದ್ದುದನ್ನು ರಾಜ್ಯದ ಜನ ಕಂಡಿದ್ದಾರೆ. ಈಗ ತಂದೆಯಾದ ನನಗೆ ನೋವು ಕೊಡಬೇಕೆಂಬ ಏಕೈಕ ದುರುದ್ದೇಶದಿಂದ ಡಾ.ಯತೀಂದ್ರ ಅವರನ್ನು ಗುರಿಯಾಗಿಸಿಕೊಂಡು ಪ್ರತಿನಿತ್ಯ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:5 × three =
Remember me
