ಬೆಂಗಳೂರು:“ಈ ದಿನ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಘೋಷಿಸಿದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವಲ್ಲಿ ಕರ್ನಾಟಕ ದೇಶಕ್ಕೆ ಮೊದಲು. ಬೇರೆ ಯಾವ ರಾಜ್ಯದಲ್ಲೂ ಈ ರೀತಿ ನಡೆದಿಲ್ಲ. ಉತ್ತರಪ್ರದೇಶ, ಗುಜರಾತ್, ಹರಿಯಾಣ, ಮಧ್ಯಪ್ರದೇಶದಲ್ಲಿ ಹೀಗೆ ನಡೆದಿದೆಯಾ, ಹೇಳಿ ನೋಡೋಣ?” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ:Marshals Carried Ashwath Narayan After Suspension | ಅಶ್ವತ್ಥ್​ ನಾರಾಯಣರನ್ನು ಹೊತ್ತು ತಂದ ಮಾರ್ಷಲ್ಸ್​​
ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡ ಸಿಎಂ, “ಬಿಜೆಪಿಯವರು ಸುಮ್ಮನೆ ಬುರುಡೆ ಬಿಡೋದು. ಅವರೆಲ್ಲಾ ಹರಿಕಥೆ ದಾಸರಲ್ಲ, ಬುರುಡೆ ದಾಸರು. ಈ ಯಡಿಯೂರಪ್ಪ 10 ಕೆಜಿಗೆ 1 ಕಾಳು ಕಡಿಮೆಯಾದರೂ ಹೋರಾಟ ಮಾಡುತ್ತೀನಿ ಎಂದು ಹೇಳುತ್ತಾರೆ. 7 ಕೆಜಿ ಅಕ್ಕಿಯನ್ನು 5 ಕಿಲೋಗೆ ಇಳಿಸಿದವರು ಇದೇ ಬಿ.ಎಸ್.​ ಯಡಿಯೂರಪ್ಪ. ಈಗ ಹೋರಾಟ ಮಾಡುತ್ತಾರಂತೆ, ಇವರು ಮಾಡುವುದಿಕ್ಕೆ ಆಗಲಿಲ್ಲ, ನಾವು ಜಾರಿಗೊಳಿಸಿದ್ದಕ್ಕೆ ಹೊಟ್ಟೆ ಕಿಚ್ಚಾಗಿದೆ” ಎಂದು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದರು.
“ಐದು ಗ್ಯಾರಂಟಿಗಳಲ್ಲಿ 4 ಗ್ಯಾರಂಟಿಗಳನ್ನ ಜಾರಿಗೊಳಿಸಿದ್ದೇವೆ. ಪ್ರತಿದಿನ 50 ಲಕ್ಷ ಮಹಿಳೆಯರು ಸರ್ಕಾರಿ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಸುಮಾರು 22 ಕೋಟಿ ಮಹಿಳೆಯರು ಈ ಯೋಜನೆಯಿಂದ ಪ್ರಯಾಣ ಮಾಡಿದ್ದಾರೆ. ಆಟೋ, ಟ್ಯಾಕ್ಸಿ, ಖಾಸಗಿ ಬಸ್​​ನವರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು. ಯಾರಿಗೂ ತೊಂದರೆಯಾಗುತ್ತಿಲ್ಲ, ಸುಮ್ಮನೆ ಇವರೇ ಹೇಳುತ್ತಿದ್ದಾರೆ” ಎಂದು ಹೇಳಿದರು.
ಇದನ್ನೂ ಓದಿ:ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ವಸತಿ ಶಾಲೆ ಪ್ರಾಂಶುಪಾಲೆಯ ಪತಿ ದೂರು ದಾಖಲು
“ಧರ್ಮಸ್ಥಳದ ವಿರೇಂದ್ರ ಹೆಗ್ಗಡೆಯವರು ನಮಗೆ ಪತ್ರ ಬರೆದಿದ್ದಾರೆ. ನಿಮ್ಮ ಶಕ್ತಿ ಯೋಜನೆಯಿಂದ ಧರ್ಮಸ್ಥಳಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ನಿಮ್ಮ ಹೆಸರಿನಲ್ಲಿ ಪೂಜೆ ಮಾಡಿಸುತ್ತಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಡಿಮೆ ವೆಚ್ಚದಲ್ಲಿ ಕಾಶಿ, ಅಯೋಧ್ಯೆ, ಪ್ರಯಾಗರಾಜ್‌ ದರ್ಶನಕ್ಕೆ ಅವಕಾಶ!; ಇಲ್ಲಿದೆ ಓದಿ ಸಂಪೂರ್ಣ ಮಾಹಿತಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × five =
Remember me
