ಬೆಂಗಳೂರು:ಇಂದು ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಭವಿಸಿದ್ದ ನಿಗೂಢ ವಸ್ತು ಸ್ಫೋಟ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಅದು ಬಾಂಬ್​ ಸ್ಫೋಟ ಎಂದು ಡಿಜಿಪಿ ಅಲೋಕ್​ ಮೋಹನ್​ ತಿಳಿಸಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೂಡ ಘಟನೆಗೆ ಪ್ರತಿಕ್ರಿಯಿಸಿದ್ದು, ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ ಎಂದಿದ್ದಾರೆ.
ಇದನ್ನೂ ಓದಿ:ಮಹಿಳೆಯರಿಗೆ ರೆಡ್‌ ಬಾಲ್ ಕ್ರಿಕೆಟ್‌ ಟೂರ್ನಿ ನಡೆಸಲು ಬಿಸಿಸಿಐ ಐತಿಹಾಸಿಕ ನಿರ್ಧಾರ!
ಘಟನೆ ಕುರಿತಂತೆ ಮಾತನಾಡಿದ ಸಿಎಂ, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ತನಿಖೆಯಲ್ಲಿ ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿದೆ ಎಂದು ತಿಳಿದುಬಂದಿದೆ, ಪೂರ್ಣ ವರದಿ ಬಂದ ನಂತರ ಇನ್ನಷ್ಟು ಮಾಹಿತಿ ಸಿಗಲಿದೆ ಎಂದರು.
ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು ಬಂದಿದ್ದಾನೆ ಎಂಬ ಮಾಹಿತಿ ದೊರೆತಿದೆ. ಘಟನೆಯಲ್ಲಿ ಸುಮಾರು ಎಂಟು ಜನರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಸಿ ಟಿವಿ ಕ್ಯಾಮರಾ ಪರೀಕ್ಷಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಗೃಹ ಸಚಿವರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಲಾಗಿದೆ. ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದಿದ್ದಾರೆ ಸಿಎಂ.
ಇದನ್ನೂ ಓದಿ:ಗೂಗಲ್ ಮಹತ್ವದ ನಿರ್ಧಾರ: ಈ ಮ್ಯಾಟ್ರಿಮೋನಿ ಆ್ಯಪ್​ಗಳಿನ್ನು ಕಾರ್ಯನಿರ್ವಹಿಸುವುದಿಲ್ಲ..!​
ರಾಜ್ಯದಲ್ಲಿ ಇಂಥ ಘಟನೆ ನಡೆಯಬಾರದಿತ್ತು. ಮಂಗಳೂರಿನಲ್ಲಿ ಆಗಿದ್ದು ಬಿಟ್ಟರೆ ಪುನ: ಅಂತಹ ಘಟನೆ ಇಲ್ಲಿ ಸಂಭವಿಸಿದೆ. ಯಾರು ಇದನ್ನು ಮಾಡಿದ್ದಾರೆ ಎಂದು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿರೋಧ ಪಕ್ಷಗಳು ಇಂತಹ ವಿಷಯದಲ್ಲಿ ರಾಜಕಾರಣ ಮಾಡಬಾರದು. ಎಲ್ಲರೂ ಈಗ ಸರ್ಕಾರದ ಜತೆ ಸಹಕರಿಸಬೇಕು ಎಂದು ಸಿಎಂ ಹೇಳಿದ್ದಾರೆ.
ಆಧಾರ್ ಲಿಂಕ್ ಆಗಿರುವ ಫೋನ್ ತನ್ನಿ ಅಂದ್ರೆ…..ಈ ಮುಗ್ಧ ಅಜ್ಜ ತಂದಿದ್ದೇನು ಗೊತ್ತೇ? ನಿಜಕ್ಕೂ ಪಾಪ ಅನಿಸುತ್ತೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twenty − nine =
Remember me
