ಹಾಸನ:ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಬಗ್ಗೆ ಎಫ್.ಎಸ್.ಎಲ್ ವರದಿ ಬಂದ ತಕ್ಷಣವೇ ಬಹಿರಂಗ ಮಾಡುತ್ತೇವೆ. ಯಾರೇ ಭಾರತದ ವಿರುದ್ಧವಿದ್ದರೂ, ದೇಶವಿರೋಧಿ ಘೋಷಣೆ ಕೂಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಇದನ್ನೂ ಓದಿ:ಆತ್ಮಲಿಂಗೇಶ್ವರ ಕ್ಷೇತ್ರದಲ್ಲಿ ಮಾ.6 ರಿಂದ 11ರವರೆಗೆ ಶಿವರಾತ್ರಿ ಸಂಭ್ರಮ: ಭಾರತೀ ಎಜುಕೇಷನ್ ಟ್ರಸ್ಟ್ ಕಾರ್ಯಾಧ್ಯಕ್ಷ ಬಸವರಾಜು ಮಾಹಿತಿ
“ದೇಶಭಕ್ತಿಯನ್ನು ಬಿಜೆಪಿಯವರು ನಮಗೆ ಹೇಳಿಕೊಡುವ ಅಗತ್ಯವಿಲ್ಲ. ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ದು ನಮ್ಮವರೇ ಹೊರತು ಬಿಜೆಪಿಯಲ್ಲ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವರದಿಯನ್ನು ನಿನ್ನೆಯಷ್ಟೇ ಸ್ವೀಕರಿಸಲಾಗಿದೆ. ಆದರೆ ವರದಿಯಲ್ಲಿರುವ ಅಂಶಗಳ ಬಗ್ಗೆ ಮಾಹಿತಿಯಿಲ್ಲ. ಸದರಿ ವರದಿಯನ್ನು ಸಚಿವ ಸಂಪುಟದ ಮುಂದೆ ಇರಿಸಿ ಚರ್ಚಿಸಲಾಗುವುದು” ಎಂದರು.
“ವಿರೋಧ ಪಕ್ಷದವರು ಅಧಿವೇಶನವನ್ನು ಬಹಿಷ್ಕರಿಸಿ ರಾಜ್ಯಪಾಲರ ಬಳಿ ದೂರು ನೀಡುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕರೊಬ್ಬರು ನಮಗೆ ಮತಹಾಕಿದ್ದರು, ಮತ್ತೊಬ್ಬರು ಗೈರಾಗಿದ್ದರು. ಇದನ್ನು ಮುಚ್ಚಿಹಾಕಲು ಈ ರೀತಿ ಮಾಡುತ್ತಿದ್ದಾರೆ. ವಿಪಕ್ಷಗಳ ಮೈತ್ರಿಯನ್ನು ಶಾಸಕರೇ ಒಪ್ಪಿರುವುದಿಲ್ಲ. ಜೆಡಿಎಸ್ ಅವರು ನಾವು ಜಾತ್ಯಾತೀತರು, ಎಂದಿಗೂ ಕೋಮುವಾದಿಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದರು” ಎಂದರು.
ಇದನ್ನೂ ಓದಿ:ಮಹಾ ವಿಕಾಸ್​ ಅಘಾಡಿ ಸೀಟು ಹಂಚಿಕೆ ಫೈನಲ್; ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರ, ಇಲ್ಲಿದೆ ಮಾಹಿತಿ
“ನಾವು ಶಂಕುಸ್ಥಾಪನೆ ನೆರವೇರಿಸಿ, ಅನುದಾನ ನೀಡಿದ್ದ ಹಲವು ಕಾರ್ಯಕ್ರಮಗಳನ್ನು ಜೆಡಿಎಸ್ ಹಾಗೂ ಬಿಜೆಪಿಯವರು ಉದ್ಘಾಟನೆ ಮಾಡಿದ್ದಾರೆ. ಸರ್ಕಾರದಲ್ಲಿ ಇದು ನಿರಂತರ ಪ್ರಕ್ರಿಯೆ. ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡುವುದನ್ನು ಪ್ರಧಾನಿ ಮೋದಿ ಅವರಿಂದಲೇ ಕಲಿತಿದ್ದು. ಅವರು ಸರ್ಕಾರಿ ಕಾರ್ಯಕ್ರಮಗಳಲ್ಲಿ, ಸಂಸತ್ ಭವನದಲ್ಲಿ ರಾಜಕೀಯ ಭಾಷಣ ಮಾಡುತ್ತಾರೆ” ಎಂದು ಹೇಳಿದರು.
ಮುಖ್ಯಮಂತ್ರಿ@siddaramaiahಅವರು ಹಾಸನದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಬಗ್ಗೆ ಎಫ್.ಎಸ್.ಎಲ್ ವರದಿ ಬಂದ ತಕ್ಷಣವೇ ಬಹಿರಂಗ ಮಾಡುತ್ತೇವೆ. ಯಾರೇ ಭಾರತದ ವಿರುದ್ಧ ಇದ್ದರೂ, ದೇಶವಿರೋಧಿ ಘೋಷಣೆ ಕೂಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.ದೇಶಭಕ್ತಿಯನ್ನು ಬಿಜೆಪಿಯವರು…
— CM of Karnataka (@CMofKarnataka)March 1, 2024

IPL 2024: ಮುಂಬೈ ಇಂಡಿಯನ್ಸ್​ ಕ್ಯಾಪ್ಟನ್​ ಸ್ಥಾನದಿಂದ ರೋಹಿತ್ ಶರ್ಮಾರನ್ನು ಕೆಳಗಿಳಿಸಲು ಇದೇ ಕಾರಣ!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − five =
Remember me
