ಚಾಮರಾಜನಗರ:ಇಂದು ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಇದನ್ನೂ ಓದಿ:2000 ರೂ. ಯಾವ ಮೂಲೆಗೆ? ಹೆಸರಾಂತ ಹೋಟೆಲ್​ನ ಹಿಗ್ಗಾಮುಗ್ಗಾ ಜಾಡಿಸಿದ ಉದ್ಯಮಿ!
ಈ ಹಿಂದೆ ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು ಈಗ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ತಮ್ಮ ಅಳಿಯ ಮಂಜುನಾಥ್​ರನ್ನು ಬಿಜೆಪಿಗೆ ಕಳಿಸಿದ್ದಾರೆ. ಮೊದಲು ನೀನು ಹೋಗಿರು, ಆಮೇಲೆ ನಾವೂ ಬರ್ತೀವಿ ಎನ್ನುವ ರೀತಿ ಅಳಿಯನನ್ನು ಬಿಜೆಪಿಗೆ ಕಳಿಸಿದ್ದಾರೆ. ಅದಕ್ಕೇ ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯತೀತ ಪದವನ್ನು ತೆಗೆದುಹಾಕುವುದು ಉತ್ತಮ ಎಂದು ವ್ಯಂಗ್ಯವಾಡಿದರು.
ಈ ಹಿಂದೆ@narendramodiಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು ಈಗ@BJP4Indiaಜೊತೆ ಸೇರಿದ್ದಾರೆ.
ತಮ್ಮ ಅಳಿಯ ಮಂಜುನಾಥ್ ಅವರನ್ನು ಬಿಜೆಪಿಗೆ ಕಳಿಸಿದ್ದಾರೆ. ಮೊದಲು ನೀನು ಹೋಗಿರು, ಆಮೇಲೆ ನಾವೂ ಬರ್ತೀವಿ ಎನ್ನುವ ರೀತಿ ಅಳಿಯನನ್ನು…
— Siddaramaiah (@siddaramaiah)March 24, 2024

ರಾಜ್ಯಕ್ಕೆ ಬರಗಾಲ ಬಂದು ಐದು ತಿಂಗಳಾದರೂ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ಬರ ಪರಿಹಾರ ಒಂದೇ ಒಂದು ರೂಪಾಯಿ ಬಂದಿಲ್ಲ. ರಾಜ್ಯದ ಜನರಿಗೆ ಉಚಿತವಾಗಿ ಅಕ್ಕಿ ಕೊಡ್ತೀವಿ. ದುಡ್ಡು ತಗೊಂಡು ನಮಗೆ ಅಕ್ಕಿ ಕೊಡಿ ಅಂದರೂ ಕೇಂದ್ರ ಬಿಜೆಪಿ ಸರ್ಕಾರ ಕೊಡಲಿಲ್ಲ. ಈಗ ರಾಜ್ಯದ ಪಾಲಿನ ಬರ ಪರಿಹಾರ ನಮಗೆ ಕೊಡಿ ಎಂದರೂ ಕೊಡುತ್ತಿಲ್ಲ. ನಮ್ಮ ತೆರಿಗೆ ಹಣಕ್ಕೆ ಬೆಲೆ ಇಲ್ವಾ? ನಮ್ಮ ರಾಜ್ಯದ ಜನರ ಬೇಡಿಕೆಗೆ ಬೆಲೆ ಇಲ್ಲವಾ? ಎಂದಿದ್ದಾರೆ.
2000 ರೂ. ಯಾವ ಮೂಲೆಗೆ? ಹೆಸರಾಂತ ಹೋಟೆಲ್​ನ ಹಿಗ್ಗಾಮುಗ್ಗಾ ಜಾಡಿಸಿದ ಉದ್ಯಮಿ!

ಶ್ರೀಲೀಲಾ ಜತೆ ನಟಿಸಲು ಸ್ಟಾರ್​ ನಟರಿಗೆ ಚಿಂತೆ! ಇದು ಮುಂದುವರಿದ್ರೆ ‘ಕಿಸ್’​ ಬೆಡಗಿಗೆ ಸಂಕಷ್ಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
