ಬೆಂಗಳೂರು:ರಾಜ್ಯ ಸರ್ಕಾರ ಮುಂದಿನ ಫೆಬ್ರವರಿಯಲ್ಲಿ ಹಮ್ಮಿಕೊಳ್ಳಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಬಗ್ಗೆ ಚರ್ಚಿಸುವ ಸಲುವಾಗಿ ನಾಳೆ (ಜೂನ್​ 28) ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕೆ ಅಭಿನಂದನೆ ಸಲ್ಲಿಸಲಿದ್ದಾರೆ. ಅಲ್ಲದೆ, ಫೆಬ್ರವರಿಯಲ್ಲಿ ರಾಜ್ಯದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರದಿಂದ ಬೇಕಾಗುವ ಅನುಮತಿಗಳಿಗೆ ಏಕಗವಾಕ್ಷಿ ಮಾಡಲು ಒತ್ತಡ ಹೇರಲಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯಕ್ಕೆ ಬರಬೇಕಾದ ಅನುದಾನಗಳ ಕುರಿತು ಪ್ರಧಾನಿ ಬಳಿ ಸಿಎಂ ಸಿದ್ದು ಚರ್ಚೆ ಮಾಡಲಿದ್ದಾರೆ. ಅದಕ್ಕೂ ಮುನ್ನ ಇಂದು ರಾಜ್ಯದ 28 ಸಂಸದರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಜೂನ್ 29ರಂದು ಅಮಿತ್ ಶಾ ಸೇರಿ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ.
ಪ್ರಧಾನಿ ಮೋದಿ ಭೇಟಿ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್​, ಸಚಿವರಾದ ಎಚ್.ಕೆ.ಪಾಟೀಲ್​, ಕೆ.ಜೆ.ಜಾರ್ಜ್, ಕೃಷ್ಣ ಬೈರೇಗೌಡ ಹಾಗೂ ಇತರೆ ಸಚಿವರು ಸಾಥ್ ನೀಡಲಿದ್ದಾರೆ.
ರಸ್ತೆಗಳು ಸುಸ್ಥಿತಿಯಲ್ಲಿ ಇರದಿದ್ದರೆ ಹೆದ್ದಾರಿ ಏಜೆನ್ಸಿಗಳು ಟೋಲ್ ವಿಧಿಸಬಾರದು: ಕೇಂದ್ರ ಸಚಿವ ನಿತಿನ್ ಗಡ್ಕರಿ

ಟೀಮ್​ ಇಂಡಿಯಾದಿಂದ ಮೋಸದಾಟ! ಇಂಜಮಾಮ್ ಆರೋಪಕ್ಕೆ ಖಡಕ್​ ತಿರುಗೇಟು ಕೊಟ್ಟ ರೋಹಿತ್​ ಶರ್ಮ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 + fifteen =
Remember me
